ಕರಾವಳಿ

ತೆಕ್ಕಟ್ಟೆ | ದಿನಸಿ ಅಂಗಡಿಯಲ್ಲಿ ಬೆಂಕಿ ಆಕಸ್ಮಿಕ; ಲಕ್ಷಾಂತರ ರೂ. ನಷ್ಟ

Pinterest LinkedIn Tumblr

ಕುಂದಾಪುರ: ತಾಲೂಕಿನ ತೆಕ್ಕಟ್ಟೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿನ ಶ್ರೀ ಬ್ರಹ್ಮಸ್ಥಾನ ದೇವಸ್ಥಾನದ ಸಮೀಪದ ಗುರು ಬ್ರಹ್ಮ ಜನರಲ್ ಸ್ಟೋರ್‌ನಲ್ಲಿ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಸಂಪೂರ್ಣ ಅಂಗಡಿ ಬೆಂಕಿಗಾಹುತಿಯಾದ ಘಟನೆ ಸೋಮವಾರ ತಡರಾತ್ರಿ ನಡೆದಿದೆ.

ಅಂಗಡಿ ಮಾಲೀಕರಾದ ಸಂತೋಷ್ ಅವರು ವ್ಯಾಪಾರ ಮುಗಿಸಿ ಮನೆಗೆ ತೆರಳಿದ ಬಳಿಕ ತಡರಾತ್ರಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಕ್ಷಣಮಾತ್ರದಲ್ಲಿ ಇಡೀ ಅಂಗಡಿಗೆ ವ್ಯಾಪಿಸಿದೆ. ಘಟನೆಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ದಿನಸಿ ಸಾಮಗ್ರಿಗಳು, ಫ್ರಿಡ್ಜ್ ಹಾಗೂ ಪೀಠೋಪಕರಣಗಳು ಬೆಂಕಿಗೆ ಆಹುತಿಯಾಗಿದೆ.

ಶಾರ್ಟ್ ಸರ್ಕ್ಯೂಟ್ ಕಾರಣ?: ಅಂಗಡಿಯಲ್ಲಿದ್ದ  ಫ್ರಿಡ್ಜ್‌ನಲ್ಲಿ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಬೆಂಕಿ ಹೊತ್ತಿಕೊಂಡಿದೆ ಎಂದು ಶಂಕಿಸಲಾಗಿದೆ. ಈ ಅಗ್ನಿ ಅವಘಡದಿಂದ ಸುಮಾರು ಲಕ್ಷಾಂತರ ರೂಪಾಯಿ ಹಾನಿ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.  ಸ್ಥಳಕ್ಕೆ ದೌಡಾಯಿಸಿದ ಕುಂದಾಪುರ ಅಗ್ನಿಶಾಮಕ ದಳದವರು  ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದರು.

ಕುಂದಾಪುರ ಅಗ್ನಿಶಾಮಕ ಠಾಣಾಧಿಕಾರಿ ವಿ. ಸುಂದರ್, ಸಹಾಯಕ ಠಾಣಾಧಿಕಾರಿ ಕಾಜಾ ಹುಸೇನ್, ಪ್ರಮುಖ ಅಗ್ನಿಶಾಮಕ ಸತೀಶ್ ಶೆಣೈ, ಚಾಲಕ ಬಸವರಾಜ, ಅಗ್ನಿಶಾಮಕರಾದ ಅಭಿಷೇಕ್, ರಿಯಾಝ್ ಪಾಟೀಲ್ ಕಾರ್ಯಾಚರಣೆಯಲ್ಲಿದ್ದರು.

Comments are closed.