ಕರಾವಳಿ

ಕಾನ್ಪುರದಲ್ಲಿ ತರಬೇತಿ ವಿಮಾನ ಪತನ: ಉಡುಪಿ ಹಿರಿಯಡಕ ಮೂಲದ ಪೈಲಟ್ ಅಭಿಷೇಕ್ ಪೂಜಾರಿ ಮೃತ್ಯು

Pinterest LinkedIn Tumblr

 

ಉಡುಪಿ/ಕಾನ್ಪುರ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಗುರುವಾರ ಸಂಭವಿಸಿದ ತರಬೇತಿ ವಿಮಾನ ಅಪಘಾತದಲ್ಲಿ ಕರ್ನಾಟಕದ ತರಬೇತಿ ಪೈಲಟ್ ಸೇರಿದಂತೆ ಇಬ್ಬರು ಮೃತಪಟ್ಟಿದ್ದಾರೆ. ಗಂಗಾ ನದಿ ಬಳಿಯ ನತ್ತುಪುರವಾ ಗ್ರಾಮದ ಸಮೀಪದ ಗಂಗಾ ಬ್ಯಾರೇಜ್ ಪ್ರದೇಶದಲ್ಲಿ ಡಬಲ್ ಎಂಜಿನ್ ವಿಮಾನ ಪತನಗೊಂಡಿದೆ. ಮೃತರನ್ನು ಗುಜರಾತ್ ಮೂಲದ ಬೋಧಕ ಪೈಲಟ್ ಸಚಿನ್ ಭಾಟಿಯಾ ಹಾಗೂ ಕರ್ನಾಟಕದ ಅಭಿಷೇಕ್ ಪೂಜಾರಿ ಎಂದು ಗುರುತಿಸಲಾಗಿದೆ.

ಉತ್ತರಪ್ರದೇಶ ಕಾನ್ಪುರದಲ್ಲಿ ಖಾಸಗೀ ತರಬೇತಿ ವಿಮಾನ ಪತನಗೊಂಡು ಉಡುಪಿ ಮೂಲದ ಪೈಲಟ್ ಮೃತಪಟ್ಟಿರುವ ಬಗ್ಗೆ ಮಾಹಿತಿಯು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು ಈ ಬಗ್ಗೆ ಇಲಾಖೆ ಮಾಹಿತಿ ಕಲೆಹಾಕಿದೆ.

ಮೃತ ಅಭಿಷೇಕ್ ಪೂಜಾರಿ ಅವರ ಮೂಲವು ಉಡುಪಿ ಜಿಲ್ಲೆಯ ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯ ಕಣಜಾರು ಗ್ರಾಮದ ಕಡೇಬೆರ್ಕೆ ಆಗಿದೆ. ಅವರು ಉತ್ತರಪ್ರದೇಶದ ಕಾನ್ಪುರದಲ್ಲಿ ಸುಮಾರು ಎರಡೂವರೆ ವರ್ಷದಿಂದ ಖಾಸಗೀ ಟ್ರೈನಿ ಪೈಲೆಟ್ ಆಗಿ ತರಬೇತಿ ಪಡೆಯುತ್ತಿದ್ದಾರೆ. ಇವರ ತಂದೆ ಪ್ರಭಾಕರ ಪೂಜಾರಿ ತಾಯಿ ಶಶಿಕಲಾ ಪೂಜಾರಿಯವರು ಮಹರಾಷ್ಟ್ರ ರಾಜ್ಯದ ಮುಂಬೈನಲ್ಲಿಯೇ ವಾಸ್ತವ್ಯವಿದ್ದು ಅಭಿಷೇಕ್ ಪೂಜಾರಿ ಆಗಾಗ್ಗೆ ತಮ್ಮ ಕುಟುಂಬದೊಂದಿಗೆ ತಾಯಿಯ ತಮ್ಮ ಜೀವನ್ ಕುಮಾರ್ ಎನ್ನುವರ ಮನೆಯಾದ ಉಡುಪಿ ಜಿಲ್ಲೆಯ ಹಿರಿಯಡ್ಕದ ಕಣಜಾರು ಗ್ರಾಮದ ಕಡೇಬೆರ್ಕೆಗೆ ಬಂದು ಹೋಗುತ್ತಿದ್ದರು.

ಕುಟುಂಬದವರು ಮುಂದಿನ ಪ್ರಕ್ರಿಯೆ ಬಗ್ಗೆ ಕಾನ್ಪುರಕ್ಕೆ ತೆರಳಿದ್ದು, ಕಾನೂನು ಕ್ರಮ ಜರುಗಿಸಲಾಗುತ್ತಿರುತ್ತದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ಪ್ರಕಟಣೆ ತಿಳಿಸಿದೆ.

Comments are closed.