ಕರಾವಳಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್; 3 ದಿನಗಳ ಉಚಿತ ಸೀರೆ ಗುಚ್ಚ ತರಬೇತಿ ಉದ್ಘಾಟನೆ

Pinterest LinkedIn Tumblr

ಕುಂದಾಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ರಿಜಿಸ್ಟರ್ ಕುಂದಾಪುರ 2  ಯೋಜನಾ ಕಚೇರಿ ಹಾಗೂ ರಾಷ್ಟ್ರೀಯ ಸ್ವಸಹಾಯ ಸಂಘ ತರಬೇತಿ ಸಂಸ್ಥೆ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಸಂಘದ ಸದಸ್ಯರಿಗೆ 3 ದಿನಗಳ ಉಚಿತ ಸೀರೆ ಗುಚ್ಚ ತರಬೇತಿ ಉದ್ಘಾಟನೆ ಕಾರ್ಯಕ್ರಮವನ್ನು ರೋಟರಿ ಕ್ಲಬ್ ಕೋಟೇಶ್ವರ ಸಭಾಭವನದಲ್ಲಿ ಉದ್ಘಾಟಿಸಲಾಯಿತು.

ಕಾರ್ಯಕ್ರಮವನ್ನು ರೋಟರಿ ಕ್ಲಬ್ ಕೋಟೇಶ್ವರ ಅಧ್ಯಕ್ಷೆ ಅಕ್ಷತಾ ಐತಾಳ್ ಅವರು ಉದ್ಘಾಟಿಸಿ ಕಾರ್ಯಕ್ರಮಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಗ್ರಾಮಅಭಿವೃದ್ಧಿ ಯೋಜನೆಗೆ ಸೇರಿದ ಮೇಲೆ ಮಹಿಳೆಯರು ಬ್ಯಾಂಕಿನ ವ್ಯವಹಾರಗಳನ್ನು ಕಲಿತು ಸ್ವಾವಲಂಬಿ ಜೀವನ ನಡೆಸುತ್ತಿದ್ದಾರೆ. ಮಹಿಳೆಯರಿಗೆ ಉಚಿತವಾಗಿ ನೀಡುತ್ತಿರುವ ಸೀರೆ ಗುಚ್ಚದ ತರಬೇತಿಯನ್ನು ಪಡೆದುಕೊಂಡು ಸ್ವಾವಲಂಬಿಗಳಾಗಬೇಕು. ಇದು ಸಮಾಜದಲ್ಲಿ ಮಾದರಿ ಕಾರ್ಯಕ್ರಮವಾಗಿದ್ದು ರೋಟರಿ ಕ್ಲಬ್ ಯಾವಾಗಲೂ ಸಹಕಾರ ನೀಡುತ್ತದೆ ಎಂದು ಹೇಳಿದರು‌.

ತಾಲೂಕಿನ ಯೋಜನಾಧಿಕಾರಿ ಸುಧೀರ್ ಅವರು ಕಾರ್ಯಕ್ರಮದ ಕುರಿತು ಪ್ರಾಸ್ತಾವಿಕ ಮಾತುಗಳನ್ನಾಡಿದರು.

ಉಡುಪಿ ತರಬೇತಿ ಸಂಸ್ಥೆಯ ಉಪನ್ಯಾಸಕರಾದ ನವೀನ್ ಶೆಟ್ಟಿ ಗ್ರಾಮಾಭಿವೃದ್ಧಿ ಯೋಜನೆ ನಡೆದು ಬಂದ ದಾರಿ, ಸೀರೆಗುಚ್ಚ ಮೂರು ದಿನದ ತರಬೇತಿಯ ನಿಯಮಾವಳಿಗಳ ಬಗ್ಗೆ ತಿಳಿಸಿದರು.

ಸೀರೆ ಗುಚ್ಛ ತರಬೇತಿ ಶಿಕ್ಷಕಿ ಚೈತ್ರಾ, ರಾಷ್ಟ್ರೀಯ ಸ್ವಸಹಾಯ ಸಂಘ ತರಬೇತಿ ಸಂಸ್ಥೆ ಉಡುಪಿಯ ಉಪನ್ಯಾಸಕ ನವೀನ್ ಶೆಟ್ಟಿ, ರೋಟರಿ ಕ್ಲಬ್ ಸದಸ್ಯ ನಾಗರಾಜ್, ಧ.ಗ್ರಾ. ಯೋಜನೆ ಮೇಲ್ವಿಚಾರಕಿ ರೋಹಿಣಿ, ಜ್ಞಾನವಿಕಾಸ ಸಮನ್ವಯ ಅಧಿಕಾರಿ ಕವಿತ, ಸೀರೆಗುಚ್ಚ ತರಬೇತಿ ಪಡೆದುಕೊಳ್ಳುವ 26 ಮಂದಿ ಅಭ್ಯರ್ಥಿಗಳು, ಸೇವಾ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಜ್ಞಾನವಿಕಾಸ ಸಮನ್ವಯ ಅಧಿಕಾರಿ ಕವಿತಾ ನಿರೂಪಿಸಿ, ಮೇಲ್ವಿಚಾರಕರಾದ ರೋಹಿಣಿ ಸ್ವಾಗತಿಸಿ, ವಂದಿಸಿದರು.

Comments are closed.