ಕುಂದಾಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ) ಕುಂದಾಪುರ 2 ಯೋಜನಾ ಕಚೇರಿ ವ್ಯಾಪ್ತಿಯ ಕಮಲಶಿಲೆ ವಲಯದಲ್ಲಿ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಲ್ಲಿ ಈ ದಿನ ಮೂರು ತಿಂಗಳ ಉಚಿತ ಟ್ಯೂಷನ್ ಕ್ಲಾಸ್ ಕಾರ್ಯಕ್ರಮವನ್ನು ಕಮಲಶಿಲೆ ಬ್ರಾಹ್ಮಿ ಪ್ರೌಢಶಾಲೆ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮವನ್ನು ಶಾಲಾ ಮುಖ್ಯೋಪಾಧ್ಯಯರಾದ ಸುರೇಂದ್ರ ಶೆಟ್ಟಿ ಸರ್ ಅವರು ಉದ್ಘಾಟಿಸಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ಟ್ಯೂಷನ್ ಕ್ಲಾಸ್ ನಮ್ಮ ಶಾಲೆಯನ್ನು ಆಯ್ಕೆ ಮಾಡಿಕೊಂಡಿರುವುದು ಬಹಳ ಖುಶಿಯ ಸಂಗತಿ, ವಿದ್ಯಾರ್ಥಿಗಳು ಈ ಕಾರ್ಯಕ್ರಮದ ಪ್ರಯೋಜನವನ್ನು ಪಡೆದುಕೊಳ್ಳಬೇಕೆಂದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ತಾಲೂಕಿನ ಕೃಷಿ ಮೇಲ್ವಿಚಾರಕರಾದ ಪ್ರದೀಪ್ ಅವರು ಕಾರ್ಯಕ್ರಮದ ಕುರಿತು ಪ್ರಾಸ್ತವಿಕ ಮಾತುಗಳನ್ನಾಡಿದರು.
ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಯರಾದ ಸುರೇಂದ್ರ ಶೆಟ್ಟಿ, ಶಾಲಾ ಶಿಕ್ಷಕ ವೃಂದ, ಒಕ್ಕೂಟ ಪದಾಧಿಕಾರಿ ಕವಿತಾ,ಕೃಷಿ ಅಧಿಕಾರಿ ಪ್ರದೀಪ್, ಮೇಲ್ವಿಚಾರಕರ ಸಿಂಧು, ಜ್ಞಾನ ವಿಕಾಸ ಸಮನ್ವಯಾಧಿಕಾರಿ ಕವಿತಾ ಗೌಡ, ಸೇವಾ ಪ್ರತಿನಿಧಿ ಗೀತಾ, ಸುಪ್ರೀತಾ, ಶಾಲಾ ಮಕ್ಕಳು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಜ್ಞಾನವಿಕಾಸ ಸಮನ್ವಯಾಧಿಕಾರಿ ಕವಿತ ಗೌಡ ನಿರೂಪಿಸಿ, ಗೀತಾ ಸ್ವಾಗತಿಸಿ, ಮೇಲ್ವಿಚಾರಕಿ ಸಿಂಧು ವಂದಿಸಿದರು.
Comments are closed.