ಕರಾವಳಿ

ಚಿತ್ತೂರು | ವರ್ಗಾವಣೆಗೊಂಡ ಮೆಸ್ಕಾಂ ಲೈನ್‌ಮ್ಯಾನ್‌ಗೆ ಬೀಳ್ಕೊಡುಗೆ

Pinterest LinkedIn Tumblr

ಕುಂದಾಪುರ: ಕಳೆದ ಹತ್ತು ವರ್ಷಗಳಿಂದ ಚಿತ್ತೂರಿನಲ್ಲಿ ಮೆಸ್ಕಾಂ ಸಿಬ್ಬಂದಿಯಾಗಿ ಲೈನ್‌ಮ್ಯಾನ್ ವೃತ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಬೆಳಗಾವಿ ಮೂಲದ ಕಿಶೋರ್ ಕುಮಾರ್ ಅವರು ಬೆಳಗಾವಿಗೆ ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ರಿಕ್ಷಾ ಚಾಲಕ ಮಾಲಕರ ಸಂಘ ಚಿತ್ತೂರು ವತಿಯಿಂದ ಅಭಿನಂದಿಸಿ ಬೀಳ್ಕೊಡುಗೆ ನೀಡಲಾಯಿತು.

ಈ ಸಂದರ್ಭದಲ್ಲಿ ಉದ್ಯಮಿ ಪ್ರೀತಮ್ ಶೆಟ್ಟಿ , ಚಿತ್ತೂರು ಗ್ರಾ.ಪಂ. ನಿಕಟಪೂರ್ವ ಅಧ್ಯಕ್ಷ ರವಿರಾಜ್ ಶೆಟ್ಟಿ, ತಾಲೂಕು ಪಂಚಾಯತ್ ಮಾಜಿ ಸದಸ್ಯ ಉದಯ ಜಿ. ಪೂಜಾರಿ, ರಿಕ್ಷಾ ಚಾಲಕ ಮಾಲಕರ ಸಂಘದ ಗೌರವಾಧ್ಯಕ್ಷರಾದ ಸುರೇಶ್ ಪೂಜಾರಿ ಅಂಬಿಕಾ ಚಿತ್ತೂರು, ರಿಕ್ಷಾ ಚಾಲಕ ಮಾಲಕರ ಸಂಘದ ಸ್ಥಾಪಕ ಕಾರ್ಯದರ್ಶಿ ಅಬ್ದುಲ್ ಸಲಾಂ ಚಿತ್ತೂರು, ಸಂಘದ ಅಧ್ಯಕ್ಷ ರಾಘವೇಂದ್ರ, ಪದಾಧಿಕಾರಿಗಳಾದ ರಾಜೇಶ್ ಶೆಟ್ಟಿ, ಶರತ್ ಪೂಜಾರಿ, ಕುಸುಮಾಕರ  ಪೂಜಾರಿ, ಕೃಷ್ಣ ಪೂಜಾರಿ, ಶೇಖರ ನಾಯಕ್, ಜಿ. ಎನ್. ಸುರೇಶ್ ಹಾಗೂ ಇನ್ನಿತರ ಸದಸ್ಯರು ಉಪಸ್ಥಿತರಿದ್ದರು.

ಅಬ್ದುಲ್ ಸಲಾಂ ಸ್ವಾಗತಿಸಿ, ವಂದಿಸಿದರು.

Comments are closed.