ಅಂತರಾಷ್ಟ್ರೀಯ

ಹಜ್ ಯಾತ್ರೆ ವೇಳೆ ಸಂಭವಿಸಿದ ಕಾಲ್ತುಳಿತ: ಸಾವಿನ ಸಂಖ್ಯೆ 453ಕ್ಕೆ ಏರಿಕೆ; 719ಕ್ಕೂ ಹೆಚ್ಚು ಯಾತ್ರಿಕರು ತೀವ್ರವಾಗಿ ಗಾಯ..ಇಲ್ಲಿದೆ ವಿಡಿಯೋ

Pinterest LinkedIn Tumblr

hajj

ದುಬೈ: ಸೌದಿ ಅರೇಬಿಯಾದಲ್ಲಿರುವ ಮುಸ್ಲಿಮರ ಪವಿತ್ರ ಸ್ಥಳ ಮೆಕ್ಕಾದ ಮಸೀದಿ ಬಳಿ ಹಜ್ ಯಾತ್ರೆ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟವರ ಸಂಖ್ಯೆ 453ಕ್ಕೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ ಇನ್ನು ಹೆಚ್ಚುವ ಸಾಧ್ಯತೆ ಇದೆ.

ಬಕ್ರೀದ್ ಹಬ್ಬದ ಪ್ರಾರ್ಥನೆ ವೇಳೆ ನೂಕುನುಗ್ಗಲು ಉಂಟಾಗಿ ಕಾಲ್ತುಳಿತ ಸಂಭವಿಸಿದ್ದು, ದುರಂತದಲ್ಲಿ 453 ಮಂದಿ ಮೃತಪಟ್ಟಿದ್ದಾರೆ ಮತ್ತು 719ಕ್ಕೂ ಹೆಚ್ಚು ಯಾತ್ರಿಕರು ತೀವ್ರವಾಗಿ ಗಾಯಗೊಂಡಿದ್ದಾರೆ.

hajj234

hajj23

hajj1

ಮೆಕ್ಕಾದಿಂದ ಸುಮಾರು 5 ಕಿ.ಮೀ.ದೂರದಲ್ಲಿರುವ ಮೀನಾದಲ್ಲಿ ಈ ದುರಂತ ಸಂಭವಿಸಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗುತ್ತಿದೆ. ಪರಸ್ಥಿತಿ ನಿಯಂತ್ರಣದಲ್ಲಿದ್ದು, ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೆಕ್ಕಾದಲ್ಲಿ ಕಳೆದ 15 ದಿನಗಳಲ್ಲಿ ಸಂಭವಿಸಿದ ಎರಡನೇ ಭೀಕರ ದುರಂತ ಇದಾಗಿದ್ದು, ಸೆಪ್ಟೆಂಬರ್ 12ರಂದು ಕ್ರೇನ್ ಕುಸಿದು 107 ಮಂದಿ ಮೃತಪಟ್ಟಿದ್ದರು. ಈಗ ಬಕ್ರೀದ್ ಮುನ್ನಾ ದಿನ ಮತ್ತೊಂದು ದುರಂತ ಸಂಭವಿಸಿದೆ.

ರಾಜ್ಯದಿಂದ 6 ಸಾವಿರ ಮಂದಿ ಹಜ್ ಯಾತ್ರೆಗೆ
ಈ ಬಾರಿ ಕರ್ನಾಟಕದಿಂದ ಸುಮಾರು 6.400 ಮಂದಿ ಹಜ್ ಯಾತ್ರೆಗೆ ತೆರಳಿದ್ದಾರೆ ಎಂದು ಮೂಲಗಳು ತಿಳಿಸಿವೆ. ಕರ್ನಾಟಕ ಸೇರಿದಂತೆ ಭಾರತದಿಂದ ಸುಮಾರು 1,20,000 ಮಂದಿ ಹಜ್ ಯಾತ್ರೆಗೆ ತೆರಳಿದ್ದಾರೆ.

https://youtu.be/aam6bLBIFcA

Write A Comment