ಮುಂಬೈ: ‘ಭಾರತದಲ್ಲೇ ತಯಾರಿಸಿ’ ಸಪ್ತಾಹದ ಅಂಗವಾಗಿ ದಕ್ಷಿಣ ಮುಂಬೈನ ಗಿರ್ಗಾಂವ್ ಚೌಪಾಟಿಯಲ್ಲಿ ಏರ್ಪಡಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮದ ವೇಳೆ ಭಾನುವಾರ ಭಾರಿ ಅಗ್ನಿ ಅನಾಹುತ ಸಂಭವಿಸಿದೆ.
ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್, ರಾಜ್ಯಪಾಲ ಸಿ. ವಿದ್ಯಾಸಾಗರ್ ರಾವ್, ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ, ಬಾಲಿವುಡ್ ನಟರಾದ ಅಮಿತಾಭ್ ಬಚ್ಚನ್, ಅಮೀರ್ ಖಾನ್, ವಿವೇಕ್ ಒಬೆರಾಯ್ ಮತ್ತು ಕತ್ರಿನಾ ಕೈಫ್ ಸೇರಿದಂತೆ ಹಲವು ಗಣ್ಯರು ಈ ವೇಳೆ ಸ್ಥಳದಲ್ಲಿದ್ದರು.
ಅಮಿತಾಭ್ ಅವರ ಕಾರ್ಯಕ್ರಮ ನಡೆದ ಬಳಿಕ ಮಹಾರಾಷ್ಟ್ರದ ಕಲಾವಿದರ ತಂಡ ನೃತ್ಯ ಪ್ರದರ್ಶನ ನೀಡುತ್ತಿತ್ತು. ಈ ವೇಳೆ ವೇದಿಕೆಯ ಕೆಳಭಾಗದಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಕಾರ್ಯಾಚರಣೆ ನಡೆಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ಹತೋಟಿಗೆ ತಂದರು.