ಮುಂಬೈ

ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲು ಹೋದ ದಂಪತಿಗಳಿಗೆ ಪೊಲೀಸ್ ಹಿಗ್ಗಾಮುಗ್ಗ ಥಳಿಸುತ್ತಿರುವ ವೀಡಿಯೋ ಬಹಿರಂಗ !

Pinterest LinkedIn Tumblr

https://youtu.be/-50N2bLonow

ಮುಂಬೈ: ಮುಂಬೈಯ ಕಾಂದಿವಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲು ಹೋದ ದಂಪತಿಗಳಿಗೆ ಪೊಲೀಸ್ ಹಿಗ್ಗಾಮುಗ್ಗ ಥಳಿಸುತ್ತಿರುವ ವೀಡಿಯೋವೊಂದನ್ನು ಸುದ್ದಿ ಮಾಧ್ಯಮವೊಂದು ಬಹಿರಂಗ ಪಡಿಸಿದೆ.

ಪೊಲೀಸರು ಯಾಕೆ ಆ ದಂಪತಿಗಳಿಗೆ ಥಳಿಸುತ್ತಿದ್ದಾರೆ ಎಂಬುದು ಈವರೆಗೆ ತಿಳಿದು ಬಂದಿಲ್ಲ. ಆದರೆ ಪೊಲೀಸರ ಈ ವರ್ತನೆ ಇಡೀ ಪೊಲೀಸ್ ಇಲಾಖೆಯನ್ನೇ ಪ್ರಶ್ನಿಸುವಂತಾಗಿದೆ.

ಸೋಮವಾರ ಈ ವೀಡಿಯೋ ಬಹಿರಂಗವಾಗುತ್ತಿದ್ದಂತೆ, ಈ ಪ್ರಕರಣದ ಬಗ್ಗೆ ಕಟ್ಟು ನಿಟ್ಟಿನ ಕ್ರಮ ತೆಗೆದುಕೊಳ್ಳುವುದಾಗಿ ಪೊಲೀಸ್ ಮೇಲಾಧಿಕಾರಿಗಳು ಹೇಳಿದ್ದಾರೆ.

ಈ ಪ್ರಕರಣದ ಬಗ್ಗೆ ತನಿಖೆ ನಡೆಯುತ್ತಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಮುಂಬೈ ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.

Comments are closed.