ರಾಷ್ಟ್ರೀಯ

ತಮಿಳುನಾಡಿನಲ್ಲಿ ಕಾವೇರಿ ಮಂಡಳಿ ರಚನೆಗಾಗಿ ಪ್ರತಿಭಟನೆ ನಡೆಸುತ್ತಿದ್ದಾಗ ಓರ್ವನಿಗೆ ಕರೆಂಟ್ ಶಾಕ್ ! ಇಲ್ಲಿದೆ ವೀಡಿಯೊ…

Pinterest LinkedIn Tumblr

https://youtu.be/iCDrGHtBlgg

ಚೆನ್ನೈ: ಕಾವೇರಿ ನಿರ್ವಹಣಾ ಮಂಡಳಿ ರಚನೆ ಮಾಡಬೇಕು ಎಂದು ಒತ್ತಾಯಿಸಿ ತಮಿಳುನಾಡಿನಲ್ಲಿ ಬಂದ್ ಗೆ ಕರೆ ನೀಡಲಾಗಿದ್ದು ಈ ಸಂಬಂಧ ನಡೆಸಲಾಗುತ್ತಿದ್ದ ಪ್ರತಿಭಟನೆ ವೇಳೆ ಪ್ರತಿಭಟನಾಕಾರನೊಬ್ಬನಿಗೆ ಕರೆಂಟ್ ಶಾಕ್ ಹೊಡೆದಿದೆ.

ತಿನ್ದಿವನಂ ರೈಲು ನಿಲ್ದಾಣದಲ್ಲಿ ಪಟ್ಟಾಲಿ ಮಕ್ಕಳ್ ಕಚ್ಚಿ(ಪಿಎಂಕೆ) ಕಾರ್ಯಕರ್ತರು ರೈಲು ನಿಲ್ಲಿಸಿ ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ರಂಜಿತ್ ಎಂಬಾತ ರೈಲಿನ ಮೇಲೆ ಹೋಗಿ ಕೇಂದ್ರ ಸರ್ಕಾರದ ವಿರುದ್ಧ ಕೂಗಾಡುತ್ತಿದ್ದ ವೇಳೆ ಆತನಿಗೆ ರೈಲಿಗಾಗಿ ಅಳವಡಿಸಿದ್ದ ವಿದ್ಯುತ್ ಕಂಬಿ ತಾಗಿ ಬೆಂಕಿ ಹೊತ್ತಿಕೊಂಡಿದೆ. ವಿದ್ಯುತ್ ಶಾಕ್ ನಿಂದ ರಂಜಿತ್ ಶೇಖಡ 70ರಷ್ಟು ಭಾಗ ಸುಟ್ಟು ಹೋಗಿದ್ದು ಕೂಡಲೇ ಆತನನ್ನು ಸ್ಥಳೀಯ ಆಸ್ಪತ್ರಗೆ ದಾಖಲಿಸಲಾಯಿತು.

ಪಿಎಂಕೆ ಪಕ್ಷ ರಾಜ್ಯಾದ್ಯಂತ ಬಂದ್ ಗೆ ಕರೆ ನೀಡಿದ್ದು ಪಕ್ಷದ ಕಾರ್ಯಕರ್ತರು ಹಲವೆಡೆ ರೈಲುಗಳನ್ನು ನಿಲ್ಲಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.

Comments are closed.