ರಾಷ್ಟ್ರೀಯ

ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಅಪಾಯಕ್ಕೆ ಸಿಕ್ಕ ಪ್ರಯಾಣಿಕನ ರಕ್ಷಣೆ: ವಿಡಿಯೋ ವೈರಲ್!

Pinterest LinkedIn Tumblr

ಮುಂಬೈ: ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಪ್ರಯಾಣಿಕನೋರ್ವ ಅಪಾಯಕ್ಕೆ ಸಿಲುಕಿದ್ದ ಘಟನೆ ಸೋಮವಾರ ಮುಂಬೈನಲ್ಲಿ ನಡೆದಿದೆ.

https://youtu.be/J6FJNBP5H_Q

ಮುಂಬೈನ ಪನ್ವೆಲ್ ರೈಲು ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ಸಹ ಪ್ರಯಾಣಿಕರು ಮತ್ತು ರೈಲ್ವೇ ಪೊಲೀಸ್ ಅಧಿಕಾರಿಗಳ ಸಮಯ ಪ್ರಜ್ಞೆಯಿಂದ ಆಗಹುದಾಗಿದ್ದ ದುರಂತ ಕೂದಲೆಳೆ ಅಂತರದಲ್ಲಿ ತಪ್ಪಿದೆ.

ಚಲಿಸುತ್ತಿದ್ದ ರೈಲು ಹತ್ತಲು ಹೋದ ವ್ಯಕ್ತಿ ನಿಯಂತ್ರಣ ಸಿಗದೇ ರೈಲಿನ ಕಂಬಿ ಹಿಡಿದು ನೇತಾಡುತ್ತಿದ್ದ. ರೈಲು ವೇಗವಾಗಿ ಚಲಿಸುತ್ತಿದ್ದರಿಂದ ಆತ ಒಳಗೂ ಹೋಗಲಾರದೇ ರೈಲಿನಿಂದ ಕೆಳಗೂ ಇಳಿಯಲಾಗದೇ ಅಪಾಯಕ್ಕೆ ಸಿಲುಕಿದ್ದ. ಇದನ್ನು ಕಂಡ ಸಹ ಪ್ರಯಾಣಿಕರು ಜೋರಾಗಿ ಕೂಗಿದ್ದು, ಈ ವೇಳೆ ನಿಲ್ದಾಣದಲ್ಲಿದ್ದ್ ರೈಲ್ವೇ ಪೊಲೀಸರು ಕೂಡಲೇ ಓಡಿ ಹೋಗಿ ರೈಲಿನಲ್ಲಿ ನೇತಾಡುತ್ತಿದ್ದ ವ್ಯಕ್ತಿಯನ್ನು ಹಿಡಿದು ಎಳೆದುಕೊಂಡಿದ್ದಾರೆ.

ಆ ಮೂಲಕ ಸಾವಿನ ಅಂಚಿನಲ್ಲಿದ್ದ ವ್ಯಕ್ತಿ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರಾಗಿದ್ದಾನೆ. ನಿಲ್ದಾಣದಲ್ಲಿದ್ದ ಸಿಸಿಟಿವಿ ಈ ದೃಶ್ಯಾವಳಿಯನ್ನು ಸೆರೆ ಹಿಡಿದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಈ ವಿಡಿಯೋ ವೈರಲ್ ಆಗಿದೆ.

Comments are closed.