ಕರಾವಳಿ

ಉಡುಪಿಯಲ್ಲಿ ಬಂದ್ ವೇಳೆ ಕೈ ಮತ್ತು ಕಮಲ ಮಾರಾಮಾರಿ: ನಗರದಲ್ಲಿ 144 ಸೆಕ್ಷನ್ ಜಾರಿ (Video)

Pinterest LinkedIn Tumblr

ಉಡುಪಿ: ಉಡುಪಿಯಲ್ಲಿ ಬಂದ್ ವೇಳೆ ಕೈ ಮತ್ತು ಕಮಲ ಮಾರಾಮಾರಿ: ನಗರದಲ್ಲಿ 144 ಸೆಕ್ಷನ್ ಜಾರಿ ಇಂಧನ ಬೆಲೆಯೇರಿಕೆ ವಿಚಾರದಲ್ಲಿ ಸೋಮವಾರ ನಡೆದ ಭಾರತ್ ಬಂದ್ ವೇಳೆ ಉಡುಪಿಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ.

ಈ ಗಲಭೆಯ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಉಡುಪಿ ನಗರಾದ್ಯಂತ 144 ಸೆಕ್ಷನ್ ಜಾರಿಗೊಳಿಸಿ ಹಸೀಲ್ದಾರ್ ಪ್ರದೀಪ್ ಕುರ್ಡೇಕರ್ ಅವರು ಆದೇಶಿಸಿದ್ದಾರೆ.

https://youtu.be/o9kyrDBCTrY

ಬನ್ನಂಜೆ ಸಮೀಪ ಬಿಜೆಪಿ ಮುಖಂಡ ಪ್ರಭಾಕರ್ ಪೂಜಾರಿ ಅವರ ಮೇಲೆ ಹಲ್ಲೆ ನಡೆಸಿರುವುದನ್ನು ಖಂಡಿಸಿ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಮುಂದೆ ಭಾರೀ ಪ್ರತಿಭಟನೆ ನಡೆಯಿತು. ಈ ವೇಳೆ ಪೊಲೀಸರು ಲಾಠಿಚಾರ್ಜ್ ನಡೆಸಿದ್ದರು ಎನ್ನಲಾಗಿದೆ. ಖುದ್ದು ಎಸ್ಪಿ ಲಕ್ಷ್ಮಣ ನಿಂಬರ್ಗಿ ಉಪಸ್ಥಿತಿಯಲ್ಲೇ ಈ ಲಾಠಿ ಚಾರ್ಜ್ ನಡೆದಿದೆ ಎನ್ನಲಾಗಿದೆ. ಕಾಂಗ್ರೆಸ್ ಮುಖಂಡ ರಮೇಶ್ ಕಾಂಚನ್ ಗೆ ಲಾಠಿ ಏಟು ಬಿದ್ದಿದ್ದು, ಸದ್ಯ ಆ ವೈರಲ್ ಇಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ.

ಉಭಯ ಪಕ್ಷಗಳ ನಾಯಕರು ಆಸ್ಪತ್ರೆಗೆ ತೆರಳಿ ತಮ್ಮ ತಮ್ಮ ಕಾರ್ಯಕರ್ತರುಗಳ ಯೋಗಕ್ಷೇಮ ವಿಚಾರಿಸುತ್ತಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಇಂದು ಸಂಜೆಯಿಂದ ನಾಳೆ ಬೆಳಗ್ಗೆ 6ಗಂಟೆವರೆಗೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

Comments are closed.