Entertainment

ಮಂತ್ರಾಲಯಕ್ಕೆ ಪುನೀತ್ ರಾಜಕುಮಾರ್ ಭೇಟಿ: ರಾಯರ ದರ್ಶನ ಪಡೆದ ಅಪ್ಪು (Video)

Pinterest LinkedIn Tumblr

ರಾಯಚೂರು: ಸ್ಯಾಂಡಲ್‍ವುಡ್ ಬಹುನಿರೀಕ್ಷಿತ ‘ನಟಸಾರ್ವಭೌಮ’ ಸಿನಿಮಾ ಬಿಡುಗಡೆಗೆ ಸಜ್ಜುಗೊಳ್ಳುತ್ತಿರುವ ಬೆನ್ನಲ್ಲೇ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಇಂದು ಮಂತ್ರಾಲಯಕ್ಕೆ ಭೇಟಿ ನೀಡಿ ರಾಯರ ದರ್ಶನ ಪಡೆದರು.

ಪತ್ನಿ ಅಶ್ವಿನಿ ಜೊತೆ ಮಠಕ್ಕೆ ಆಗಮಿಸಿದ ಪುನೀತ್ ರಾಜಕುಮಾರ್ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥರಿಂದ ಆಶೀರ್ವಾದ ಪಡೆದರು. ಇದೇ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಹಳ ದಿನಗಳಿಂದ ಮಂತ್ರಾಲಯಕ್ಕೆ ಬರಲು ಆಗಿರಲಿಲ್ಲ. ಈಗ ಫೆಬ್ರವರಿ 7ರಂದು ಸಿನಿಮಾ ಬಿಡುಗಡೆ ಆಗುತ್ತಿರುವ ಹಿನ್ನೆಲೆಯಲ್ಲಿ ರಾಯರ ಆಶೀರ್ವಾದ ಪಡೆಯಲು ಬಂದಿದ್ದೇನೆ. ಮಂತ್ರಾಲಯದಲ್ಲಿನ ರಾಜ್‍ಕುಮಾರ್ ಭವನದ ನವೀಕರಣ ಕಾರ್ಯ ಪೂರ್ಣಗೊಂಡಿದ್ದು, ಈಗ ಸಾರ್ವಜನಿಕರ ಉಪಯೋಗಕ್ಕೆ ಬರುತ್ತದೆಂದರು.

ಈ ವೇಳೆ ಪುನೀತ್ ರಾಜಕುಮಾರ್ ಅವರನ್ನು ನೋಡಲು ಬಂದ ಅಭಿಮಾನಿಗಳು ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಮುಗಿಬಿದ್ದಿದ್ದರು. ಇದರಿಂದಾಗಿ ಅಲ್ಲಿ ಕೆಲ ಹೊತ್ತು ನೂಕು ನುಗ್ಗಲು ಉಂಟಾಯಿತು.

Comments are closed.