ಕರಾವಳಿ

ಎಂಪಿ ಟಿಕೆಟ್‍ಗಾಗಿ ಶ್ರೀ ಕೃಷ್ಣನ ಮೊರೆ ಹೋದ ಜಯಪ್ರಕಾಶ್ ಹೆಗ್ಡೆ ಬೆಂಬಲಿಗರು (Video)

Pinterest LinkedIn Tumblr

ಉಡುಪಿ: ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಲೋಕಸಭೆ ಚುನಾವಣೆಗೆ ಬಿಜೆಪಿಯಿಂದ ಜಯಪ್ರಕಾಶ್ ಹೆಗ್ಡೆಗೆ ಟಿಕೆಟ್ ಸಿಗಲಿ ಎಂದು ಅವರ ಬೆಂಬಲಿಗರು ದೇವರ ಮೊರೆ ಹೋಗಿ, ವಿಶೇಷ ಪೂಜೆ ಸಲ್ಲಿಸಿದರು.

ಜಿಲ್ಲೆಯ ಶ್ರೀಕೃಷ್ಣಮಠ- ಅನಂತೇಶ್ವರ ದೇವಸ್ಥಾನ ಮತ್ತು ಚಂದ್ರಮೌಳೇಶ್ವರ ದೇವಸ್ಥಾನದಲ್ಲಿ ಜಯಪ್ರಕಾಶ್ ಹೆಗ್ಡೆ ಬೆಂಬಲಿಗರು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಸಮರ್ಥ ಅಭ್ಯರ್ಥಿಯಾಗಿರುವ ಜೆಪಿ ಅವರಿಗೆ ಬಿಜೆಪಿ ಟಿಕೆಟ್ ಕೊಡಿ ಎಂದು ಅವರ ಅಭಿಮಾನಿಗಳು ಪಕ್ಷದವರನ್ನು ಒತ್ತಾಯಿಸಿದ್ದಾರೆ.

ಯಾವುದೇ ಕಾರಣಕ್ಕೂ ಜಯಪ್ರಕಾಶ ಹೆಗ್ಡೆ ಜೆಡಿಎಸ್‍ಗೆ ಹೋಗುವುದಿಲ್ಲ, ಇದೆಲ್ಲಾ ಕೇವಲ ಊಹಾಪೋಹ. ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಜನರೊಂದಿಗೆ ಹಾಗೂ ಕಾರ್ಯಕರ್ತರೊಂದಿಗೆ ಇರುವ ಅಭ್ಯರ್ಥಿಗೆ ಹೈಕಮಾಂಡ್ ಟಿಕೆಟ್ ನೀಡಬೇಕು. ಜನರ ಅಭಿಪ್ರಾಯ ಪರಿಗಣಿಸಬೇಕು. ಅಭ್ಯರ್ಥಿಯ ಆಯ್ಕೆಯ ತನಕ ಹೋರಾಟ ನಡೆಯುತ್ತೆ, ಬಳಿಕ ಅಭ್ಯರ್ಥಿ ಘೋಷಣೆಯಾದ ನಂತರ ಪಕ್ಷದ ಅಭ್ಯರ್ಥಿಯ ಪರ ಕೆಲಸ ಮಾಡುವುದಾಗಿ ಕಾರ್ಯಕರ್ತರು ಅಭಿಪ್ರಾಯವನ್ನು ಹಂಚಿಕೊಂಡರು. ಇದೇ ವೇಳೆ ಶೋಭಾ ಕರಂದ್ಲಾಜೆ ವಿರುದ್ಧವೂ ಅಸಮಾಧಾನ ವ್ಯಕ್ತಪಡಿಸಿದರು.

Comments are closed.