ಕರಾವಳಿ

ಮೋದಿ..ಮೋದಿ ಎಂದು ಹೇಳುತ್ತಾ ಡಿಜೆ ಸೌಂಡ್’ಗೆ ಸ್ಟೆಪ್ ಹಾಕಿದ ಸಂಸದೆ ಶೋಭಾ! (Video)

Pinterest LinkedIn Tumblr

ಉಡುಪಿ: ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಭಾರೀ ಅಂತರದಲ್ಲಿ ಗೆಲುವು ಸಾಧಿಸಿ ಎರಡನೇ ಬಾರಿ ಲೋಕಸಭೆ ಪ್ರವೇಶ ಮಾಡುವ ಹಿನ್ನೆಲೆಯಲ್ಲಿ ಉಡುಪಿಯಲ್ಲಿ ವಿಜಯೋತ್ಸವ ಆಚರಿಸಲಾಯಿತು.

ಈ ವೇಳೆ ನಗರದ ಬ್ರಹ್ಮಗಿರಿ ಸರ್ಕಲ್‌ನಲ್ಲಿ ಶೋಭಾ ಕರಂದ್ಲಾಜೆ ಕಾರ್ಯಕರ್ತರೊಂದಿಗೆ ಸೇರಿಕೊಂಡು ಮೋದಿ..ಮೋದಿ ಎಂದು ಹೇಳುತ್ತಾ ಡಿಜೆ ಸೌಂಡ್’ಗೆ ಹೆಜ್ಜೆ ಹಾಕಿ ಕುಣಿದಿದ್ದಾರೆ. ಇವರಿಗೆ ಜಿಪಂ ಸದಸ್ಯೆ ಗೀತಾಂಜಲಿ ಸುವರ್ಣ, ಮುಖಂಡ ಉದಯ ಕುಮಾರ್ ಶೆಟ್ಟಿ ಸೇರಿದಂತೆ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಜೊತೆಯಾಗಿದ್ದಾರೆ.

ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಭರ್ಜರಿ ಗೆಲುವು ದಾಖಲಿಸಿದ್ದು ತಮ್ಮ ಎದುರಾಳಿ ಜೆಡಿಎಸ್‌ನಿಂದ ಕಣಕ್ಕಿಳಿದಿದ್ದ ಪ್ರಮೋದ್ ಮಧ್ವರಾಜ್ ವಿರುದ್ಧ ಶೋಭಾಮೂರುವರೆ ಲಕ್ಷ ಅಂದಾಜು ಮುನ್ನಡೆ ಪಡೆದು ಭರ್ಜರಿ ಗೆಲುವು ದಾಖಲಿಸಿದ್ದರು.

Comments are closed.