ಕನ್ನಡದ ಹಿರಿಯ ನಟ ಜೈಜಗದೀಶ್ ಮತ್ತು ವಿಜಯಲಕ್ಷ್ಮೀ ಸಿಂಗ್ ಅವರ ಪುತ್ರಿಯರಾದ ವೈಭವಿ, ವೈನಿಧಿ, ವೈಸಿರಿ ನಾಯಕಿಯರಾಗಿ ಎಂಟ್ರಿಕೊಟ್ಟಿರುವ ‘ಯಾನ’ ಸಿನೆಮಾದ ನಾಲ್ಕನೇ ವೀಡಿಯೊ ಹಾಡು ‘ಬೀಳಲೇ ನಾ ಬೀಳಲೇ’ ಬಿಡುಗಡೆಯಾಗಿದ್ದು, ಹಾಡು ಕೇಳಲು ಬಹಳ ಇಂಪಾಗಿದೆ.
ACME ಮೂವೀಸ್ ಇಂಟರ್ನ್ಯಾಷನಲ್ ಬ್ಯಾನರಿನಡಿಯಲ್ಲಿ ಮಂಗಳೂರು ಮೂಲದ ದುಬೈಯ ಹೆಸರಾಂತ ಉದ್ಯಮಿ, ನಿರ್ಮಾಪಕರಾಗಿರುವ ಹರೀಶ್ ಶೇರಿಗಾರ್ ಮತ್ತು ಶರ್ಮಿಳಾ ಶೇರಿಗಾರ್ ಹಾಗು ‘ಐ’ ಎಂಟರ್ಟೈನ್ಮೆಂಟ್’ನ ವೈಭವಿ, ವೈನಿಧಿ ಮತ್ತು ವೈಸಿರಿ ನಿರ್ಮಿಸಿರುವ ಈ ಸಿನೆಮಾದಲ್ಲಿ ಬಹುಕಾಲದ ನಂತರ ಕನ್ನಡ ಹಿರಿಯ ನಟ ಅನಂತ್ ನಾಗ್ -ಸುಹಾಸಿನಿ ಜೋಡಿ ಒಟ್ಟಿಗೆ ನಟಿಸಿರುವುದು ವಿಶೇಷ.
‘ಬೀಳಲೇ ನಾ ಬೀಳಲೇ’ ಹಾಡನ್ನು ಗಾಯಕಿ ಪ್ರಕೃತಿ ಕಾಕರ್ ಹಾಡಿದ್ದು, ಜೋಶ್ವಾ ಶ್ರೀಧರ್ ಸಂಗೀತ ನೀಡಿದ್ದಾರೆ.
ಈಗಾಗಲೇ ಮೂರು ವಿಡಿಯೋ ಹಾಡುಗಳು ಬಿಡುಗಡೆಯಾಗಿದ್ದು, ಸಾಮಾಜಿಕ ತಾಣಗಳಲ್ಲಿ ಭಾರಿ ವೈರಲ್ ಆಗಿವೆ. ವಿಜಯಲಕ್ಷ್ಮೀಸಿಂಗ್ ಅವರು ಕಥೆ ಬರೆದು ನಿರ್ದೇಶಿಸಿರುವ ಈ ಚಿತ್ರದ ದೃಶ್ಯಗಳನ್ನು ಕರಮ್ ಚಾವ್ಲಾ ಅವರು ಛಾಯಾಗ್ರಹಣ ಮಾಡಿದ್ದಾರೆ.
“ಯಾನ’ ಚಿತ್ರದಲ್ಲಿ ವೈಭವಿ, ವೈನಿಧಿ, ವೈಸಿರಿ ಅವರೊಂದಿಗೆ ಚಕ್ರವರ್ತಿ, ಸುಮುಖ, ಅಭಿಷೇಕ್, ಅನಂತನಾಗ್, ಸುಹಾಸಿನಿ, ಸಾಧುಕೋಕಿಲ, ರಂಗಾಯಣ ರಘು, ಚಿಕ್ಕಣ್ಣ, ರಾಮಕೃಷ್ಣ, ಸುಂದರ ರಾಜ್, ಸುಂದರ್, ವೀಣಾಸುಂದರ್, ಎಂ.ಎನ್.ಲಕ್ಷ್ಮೀದೇವಿ ಮುಂತಾದ ಕಲಾವಿದರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.
Comments are closed.