ರಾಷ್ಟ್ರೀಯ

ಪ್ರವಾಹದ ನೀರಿನಲ್ಲಿಯೇ ಬಾಲಕಿಯರನ್ನು1.5 ಕಿ.ಮೀ ದೂರ ಭುಜದ ಮೇಲೆ ಹೊತ್ತು ಸಾಗಿದ ಕಾನ್ಸ್ ಟೇಬಲ್! ವಿಡಿಯೋ ವೈರಲ್‌!

Pinterest LinkedIn Tumblr

ಮೊರ್ಬಿ: ದೇಶದ ವಿವಿಧೆಡೆ ಹಿಂದೆಂದೂ ಕಂಡರಿಯದ ರೀತಿಯಲ್ಲಿ ಭೀಕರ ಪ್ರವಾಹ ಪರಿಸ್ಥಿತಿ ತಲೆದೋರಿದ್ದು, ಅಪಾರ ಪ್ರಮಾಣದ ಜೀವ, ಆಸ್ತಿಪಾಸ್ತಿ ನಷ್ಟ ಉಂಟಾಗುತ್ತಿದೆ.

ಪ್ರಕೃತಿಯ ರೌದ್ರವತಾರದಿಂದಾಗಿ ಮಹಿಳೆಯರು, ಮಕ್ಕಳು, ವೃದ್ಧರು ಮನೆ ಮಠ ಕಳೆದುಕೊಂಡು ಸಂತ್ರಸ್ತರಾಗಿದ್ದು, ತೀವ್ರ ತೊಂದರೆ ಅನುಭವಿಸುವಂತಾಗಿದೆ. ಪ್ರವಾಹದ ಹೊಡೆತಕ್ಕೆ ಸಿಲುಕಿರುವ ಗುಜರಾತಿನಲ್ಲಿ ಮನಕಲಕುವ ಘಟನೆಯೊಂದು ನಡೆದಿದೆ.

ಭೀಕರ ಪ್ರವಾಹದಲ್ಲಿ ಸಿಲುಕಿದ ಇಬ್ಬರು ಹೆಣ್ಣು ಮಕ್ಕಳನ್ನು ಪೊಲೀಸ್ ಕಾನ್ಸ್ ಟೇಬಲ್ ತನ್ನ ಹೆಗಲ ಮೇಲೆ ಹೊತ್ತು ಸಾಗುವ ಮೂಲಕ ಅವರ ಜೀವ ಉಳಿಸಿದ್ದಾರೆ.

ಮೊರ್ಬಿ ಜಿಲ್ಲೆಯ ಕಲ್ಯಾಣಪುರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಸಾಗರದಂತಿದ್ದ ಪ್ರವಾಹ ನೀರಿನಲ್ಲಿ ಸಿಲುಕಿ ಭಯಭೀತಗೊಂಡಿದ್ದ ಇಬ್ಬರು ಹೆಣ್ಣು ಮಕ್ಕಳನ್ನು ಭುಜದ ಮೇಲೆ ಕುಳ್ಳಿರಿಸಿಕೊಂಡು ಗುಜರಾತ್ ಪೊಲೀಸ್ ಕಾನ್ಸ್ ಟೇಬಲ್ ಪೃಥ್ವಿರಾಜ್ ಜಡೇಜಾ ಸುಮಾರು ಒಂದೂವರೆ ಕಿ.ಮೀ. ದೂರ ಸುರಕ್ಷಿತವಾಗಿ ಹೊತ್ತು ಸಾಗಿದ್ದಾರೆ.

ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಪೃಥ್ವಿರಾಜ್ ಜಡೇಜಾ ಅವರ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆಯ ಮಹಾಪೂರವೇ ಹರಿದುಬರುತ್ತಿದೆ.

Comments are closed.