ಕರಾವಳಿ

ಗಂಗೊಳ್ಳಿಯಲ್ಲಿ ಎರಡು ಅಂಗಡಿಯಲ್ಲಿ ಬೆಂಕಿ ಅನಾಹುತ- ಲಕ್ಷಾಂತರ ನಷ್ಟ(Video)

Pinterest LinkedIn Tumblr

ಕುಂದಾಪುರ: ಗಂಗೊಳ್ಳಿ ಗ್ರಾಮದ ವಾಟರ್ ಟ್ಯಾಂಕ್ ಬಳಿ ಇರುವ ಜಿ. ದಿನೇಶ್ ನಾಯಕ್ ಮತ್ತು ಜಿ. ಪದ್ಮನಾಭ್ ನಾಯಕ್ ಎಂಬುವರ ಅಂಗಡಿಗೆ ಮಂಗಳವಾರ ಮುಂಜಾನೆ ಆಕಸ್ಮಿಕವಾಗಿ ಬೆಂಕಿ ತಗುಲಿದೆ. ಎರಡು ಅಂಗಡಿಗಳು ಸಂಪೂರ್ಣವಾಗಿ ಭಸ್ಮವಾಗಿದ್ದು ಲಕ್ಷಾಂತರ ರೂಪಾಯಿ ಹಾನಿ ಸಂಭವಿಸಿದೆ.

ಒಂದೇ ಕಟ್ಟದಲ್ಲಿರುವ ಈ ಎರಡು ಅಂಗಡಿಗಳಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು ಕುಂದಾಪುರದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ಸ್ಥಳೀಯರ ಸಹಕಾರದೊಂದಿಗೆ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸಿದ್ದಾರೆ. ಅಷ್ಟರಲ್ಲಾಗಲೇ ಅಂಗಡಿ ಒಳಗಿದ್ದ ವಿದ್ಯುತ್ ಉಪಕರಣಗಳು, ಸಾಮಾಗ್ರಿಗಳು ಬೆಂಕಿಗಾಹುತಿಯಾಗಿದೆ. ವಿದ್ಯುತ್ ಶಾರ್ಟ್ ಸರ್ಕಿಟ್ನಿಂದ ಬೆಂಕಿ ಸಂಭವಿಸಿರಬಹುದೆಂದು ಶಂಕಿಸಲಾಗಿದೆ.

ಗಂಗೊಳ್ಳಿ ಪೊಲೀಸ್ ಉಪನಿರೀಕ್ಷಕ ಭೀಮಾಶಂಕರ್ ಎಸ್ ಮತ್ತು ಗಂಗೊಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಶ್ರೀನಿವಾಸ್ ಖಾರ್ವಿ ಸ್ಥಳದಲ್ಲಿದ್ದು ರಕ್ಷಣಾ ಕಾರ್ಯದಲ್ಲಿ ಸಹಕರಿಸಿದರು.

Comments are closed.