ಉಡುಪಿ: ಬೆಂಗಳೂರಿನ ಪುಲಿಕೇಶಿ ನಗರದಲ್ಲಿ ಶಾಸಕರ ಮನೆ, ಪೊಲೀಸ್ ಠಾಣೆ ಮೇಲೆ ದಾಳಿ ಹಾಗೂ ಪೊಲೀಸರು ಮತ್ತು ಮಾಧ್ಯಮದ ಮೇಲೆ ನಡೆದ ಹಲ್ಲೆಯನ್ನು ಮುಜರಾಯಿ, ಮೀನುಗಾರಿಕಾ ಸಚಿವ ಕೋಟ ಶ್ರೀನಿವಾಸ ಖಂಡಿಸಿದ್ದಾರೆ. ಉಡುಪಿಯಲ್ಲಿ ಹೇಳಿಕೆ ನೀಡಿದ ಅವರು, ಹಿಂಸಾಚಾರದಂತಹ ವಾತಾವರಣ ನಿರ್ಮಿಸಿದ್ದು ಅಕ್ಷರಕ್ಷರ ಅಪರಾಧ. ಸಾರ್ವಜನಿಕ ಆಸ್ತಿ ನಷ್ಟಕ್ಕೆ ಕಠಿಣ ಶಿಕ್ಷೆ ಆಗಬೇಕಿದೆ. ಪೊಲೀಸ್ ಠಾಣೆಯ ಪೀಠೋಪಕರಣ ಧ್ವಂಸ ಮಾಡಿದ್ದು ಶಿಕ್ಷಾರ್ಹ ಅಪರಾಧ ಎಂದರು.
ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನಿರ್ದಾಕ್ಷಿಣ್ಯ ಕ್ರಮಕ್ಕೆ ಆದೇಶಿಸಿದ್ದು ಅವರ ಆದೇಶವನ್ನು ಸ್ವಾಗತ ಮಾಡುತ್ತೇನೆ ಎಂದು ಕೋಟ ಹೇಳಿದರು. ಅಭಿಪ್ರಾಯ ಭೇದ ಇದ್ದರೆ ಮುಕ್ತವಾಗಿ ಚರ್ಚೆಗೆ ಅವಕಾಶ ಇದೆ. ಪುಂಡಾಟಿಕೆ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳಬೇಕು. ಇಂತಹ ಪುಂಡಾಟಿಕೆ ರಾಜ್ಯದಲ್ಲಿ ನಡೆಯಬಾರದು. ಸಿಎಂ ಗೃಹ ಸಚಿವರ ಕ್ರಮವನ್ನು ನಾವು ಸ್ವಾಗತ ಮಾಡುತ್ತೇವೆ ಎಂದು ಪೂಜಾರಿ ಹೇಳಿದರು.
Comments are closed.