ಕುಂದಾಪುರ: ನಾಳೆ ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಪ್ರಸಿದ್ದ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದಲ್ಲಿ ಭಕ್ತರಿಗೆ ಕೇವಲ ದರ್ಶನಕ್ಕೆ ಮಾತ್ರವೇ ಅವಕಾಶ ಕಲ್ಪಿಸಲಾಗಿದೆ.
ಶನಿವಾರ ಬೆಳಿಗ್ಗೆ 5 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ದೇಗುಲದಲ್ಲಿ ಭಕ್ತರಿಗೆ ವಿನಾಯಕನ ದರ್ಶನಕ್ಕೆ ಅವಕಾಶವಿದೆ. ಜಿಲ್ಲಾಡಳಿತದ ಮಾರ್ಗಸೂಚಿಯಂತೆ ಆಗಮಿಸುವ ಭಕ್ತರಿಗೆ ಸ್ಯಾನಿಟೈಸರ್, ಥರ್ಮಲ್ ಸ್ಕ್ಯಾನಿಂಗ್ ವ್ಯವಸ್ಥೆಯಿದೆ. ಸಾಮಾಜಿಕ ಅಂತರದೊಂದಿಗೆ ದೇವರ ದರ್ಶನ ಮಾಡಿ ಒಂದು ಪ್ರದಕ್ಷಿಣೆ ಹಾಕಲು ವ್ಯವಸ್ಥೆ ಮಾಡಲಾಗಿದೆ.
ಗಣೇಶ ಚತುರ್ಥಿ ಹಿನ್ನೆಲೆ ಆನೆಗುಡ್ಡೆ ದೇವಸ್ಥಾನದಲ್ಲಿ ಅರ್ಚಕರಿಂದಲೇ ಪೂಜಾ ಕೈಂಕರ್ಯಗಳು ನಡೆಯಲಿದ್ದು ಭಕ್ತರಿಗೆ ಸೇವೆ ಗಂಧ ಪ್ರಸಾದ ಇರುವುದಿಲ್ಲ. ಅಲ್ಲದೇ ಅನ್ನಪ್ರಸಾದ ವ್ಯವಸ್ಥೆಯೂ ದೇವಳದಲ್ಲಿ ಇರುವುದಿಲ್ಲ. ಚೌತಿ ಹಬ್ಬದ ಸಲುವಾಗಿ ದೇವಳವನ್ನು ವಿದ್ಯುತ್ ದೀಪಾಲಂಕಾರ ಹಾಗೂ ಪುಷ್ಪಾಲಂಕಾರಗೊಳಿಸಲಾಗಿದೆ.
(ವರದಿ- ಯೋಗೀಶ್ ಕುಂಭಾಸಿ)
Comments are closed.