(ವರದಿ- ಯೋಗೀಶ್ ಕುಂಭಾಸಿ)
ಕುಂದಾಪುರ: ವಿಧಾನ ಪರಿಷತ್ ಚುನಾವಣೆಗೆ ಈ ಬಾರಿ ಪ್ರತಾಪಶ್ಚಂದ್ರ ಶೆಟ್ಟಿಯವರು ಸ್ಪರ್ಧಿಸದ ಹಿನ್ನೆಲೆ ಯು.ಬಿ. ಶೆಟ್ಟಿಯವರಿಗೆ ಪಕ್ಷದಿಂದ ಟಿಕೆಟ್ ನೀಡಲು ಪಕ್ಷದ ನಾಯಕರ ಬಳಿ ಮನವಿ ಮಾಡಿದ್ದೇವೆ ಎಂದು ಬೈಂದೂರು ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಹೇಳಿದರು.

(ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ)
ಕುಂದಾಪುರದ ಕಟ್’ಬೆಲ್ತೂರು ನಿವಾಸದಲ್ಲಿಂದು ಮಾತನಾಡಿದ ಅವರು, ವಿಧಾನಪರಿಷತ್ ಚುನಾವಣೆ ಹಿನ್ನೆಲೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಜೊತೆಗಿನ ಮಾತುಕತೆಯಲ್ಲಿ ಯು.ಬಿ. ಶೆಟ್ಟಿ ಅವರಿಗೆ ಟಿಕೇಟ್ ನೀಡಲು ಮನವಿ ಮಾಡಲಾಗಿದೆ. ನ.14 ರಂದು ನಡೆದ ಸಭೆಯಲ್ಲಿ ಸಿದ್ಧರಾಮಯ್ಯ ಸಹಿತ ಕಾಂಗ್ರೆಸ್ ಮುಖಂಡರು ಭಾಗಿಯಾಗಿದ್ದರು.ಪ್ರತಾಪಚಂದ್ರ ಶೆಟ್ಟಿಯವರ ಅನುಪಸ್ಥಿತಿಯಲ್ಲಿ ತಾನು ಮಾತನಾಡಿದ್ದೇನೆ. ಯು.ಬಿ. ಶೆಟ್ಟಿಯವರಿಗೆ ಟಿಕೆಟ್ ನೀಡಲು ಲಾಬಿ ಮಾಡಿದ್ದೇವೆ. ಯು.ಬಿ ಶೆಟ್ಟಿಯವರಿಗೆ ಟಿಕೆಟ್ ನೀಡಿ ಗೆಲ್ಲಿಸಿದಲ್ಲಿ ಕರಾವಳಿ ಭಾಗಕ್ಕೆ ಪ್ರಯೋಜನವಿದೆ. ಪಕ್ಷ ಈ ಬಗ್ಗೆ ಸೂಕ್ತ ಕ್ರಮಕೈಗೊಳ್ಳಲಿದೆ. ಪಕ್ಷದಿಂದ ಯಾರಿಗೆ ಟಿಕೆಟ್ ನೀಡಿದರೂ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸುವ ಕಾರ್ಯ ಮಾಡುತ್ತೇವೆ. ನಾನು ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಎಂದಿಗೂ ತೊಡಗಿಸಿಕೊಂಡಿಲ್ಲ ಎಂದ ಅವರು ಯು.ಬಿ. ಶೆಟ್ಟಿಯವರು ಸ್ಪರ್ಧಿಸಿದರೆ ರಾತ್ರಿ ಹಗಲೆನ್ನದೆ ಕೆಲಸ ಮಾಡುತ್ತೇವೆ ಎಂದರು.

(ಎಂ.ಎಲ್.ಸಿ ಟಿಕೆಟ್ ಆಕಾಂಕ್ಷಿ ಯು.ಬಿ ಶೆಟ್ಟಿ)

ಇನ್ನು ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಎಂ.ಎನ್ ರಾಜೇಂದ್ರ ಕುಮಾರ್ ಕೂಡ ಭಾಗವಹಿಸಿದ್ದು ಕೆಲ ನಾಯಕರು ಅವರದ್ದೇ ಅಭ್ಯರ್ಥಿಗಳ ಬಗ್ಗೆ ಒಲವು ತೋರಿದ್ದಾರೆ ಎನ್ನಲಾಗಿದೆ.
Comments are closed.