ಕರಾವಳಿ

ಕೋಟ ಜಂಕ್ಷನ್ ಬಳಿ ರಿಕ್ಷಾಗಳಿಗೆ ಡಿಕ್ಕಿ ಹೊಡೆದು ಪಲ್ಟಿಯಾದ ಮಿನಿ ಗೂಡ್ಸ್ ಟೆಂಪೋ | ವಿಡಿಯೋ ವೈರಲ್

Pinterest LinkedIn Tumblr

ಕುಂದಾಪುರ: ಮೀನು ಸಾಗಾಟದ ಪಿಕಪ್ ವಾಹನವೊಂದು ರಿಕ್ಷಾಗೆ ಡಿಕ್ಕಿ ಹೊಡೆದ ಪರಿಣಾಮ ರಿಕ್ಷಾ ಹಾಗೂ ಪಿಕಪ್ ವಾಹನ ಪಲ್ಟಿಯಾದ ಘಟನೆ ಕೋಟ ಜಂಕ್ಷನ್ ರಾಷ್ಟ್ರೀಯ ಹೆದ್ದಾರಿ ಬಳಿ ಬುಧವಾರ ಬೆಳಿಗ್ಗೆ ನಡೆದಿದೆ.

ಇಲ್ಲಿನ ಕೋಟ ಅಮೃತೇಶ್ವರಿ ದೇವಸ್ಥಾನ ರಸ್ತೆಯಿಂದ ಹೆದ್ದಾರಿಗೆ ಬರುತ್ತಿದ್ದ ರಿಕ್ಷಾಕ್ಕೆ ಉಡುಪಿ ಕಡೆಯಿಂದ ಕುಂದಾಪುರದತ್ತ ವೇಗವಾಗಿ ಸಾಗಿ ಬಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದರಿಂದ ರಿಕ್ಷಾ ಪಲ್ಟಿಯಾಗಿದ್ದು ನಿಯಂತ್ರಣ ತಪ್ಪಿದ ಪಿಕಪ್ ಕೂಡ ಪಲ್ಟಿಯಾಗಿ ಮತ್ತೊಂದು ರಿಕ್ಷಾಕ್ಕೆ ಡಿಕ್ಕಿಯಾಗಿದೆ. ಪಿಕಪ್ ಚಾಲಕ ಹಾಗೂ ರಿಕ್ಷಾ ಚಾಲಕನಿಗೆ ಗಾಯಗಳಾಗಿದ್ದು ಬ್ರಹ್ಮಾವರ ಖಾಸಗಿ ಆಸ್ಪತ್ರೆಗೆ ದಾಖಲಿಸಿದ ಮಾಹಿತಿಗಳಿದೆ. ಅಪಘಾತದ ಪರಿಣಾಮ ಪಿಕಪ್ ನಲ್ಲಿದ್ದ ಮೀನಿನ ಬಾಕ್ಸ್ ಗಳು ಹೆದ್ದಾರಿಯಲ್ಲಿ ಚೆಲ್ಲಾಪಿಲ್ಲಿಯಾಗಿತ್ತು.

ಅಪಘಾತದ ದೃಶ್ಯಾವಳಿಗಳು ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Comments are closed.