ಕರ್ನಾಟಕ

ಶಿಬರೂರು: ಬ್ರಹ್ಮಕುಂಭಾಭಿಷೇಕ, ನಾಗಮಂಡಲ ಸಂಪನ್ನ : ಇಂದಿನಿಂದ ಎಪ್ರಿಲ್ 30ರ ತನಕ ವಿಶೇಷ ಜಾತ್ರಾ ಮಹೋತ್ಸವ ( Video News)

Pinterest LinkedIn Tumblr

 

ಮಂಗಳೂರು / ಸುರತ್ಕಲ್,ಏಪ್ರಿಲ್.27: 1976ರಲ್ಲಿ ಶಿಬರೂರುಗುತ್ತು ಮುದ್ದಣ್ಣ ಶೆಟ್ಟರ ಮುತುವರ್ಜಿಯಲ್ಲಿ ಶಿಬರೂರು ಕ್ಷೇತ್ರವು ಸಂಪೂರ್ಣ ನವೀಕರಣಗೊಂಡಿದ್ದು 2010ರಲ್ಲಿ ಕೊಂಜಾಲಗುತ್ತು ಪ್ರಭಾಕರ ಶೆಟ್ಟರ ನೇತೃತ್ವದಲ್ಲಿ ಹಾಗೂ ಊರವರ ಸಹಕಾರದಿಂದ ಸುಮಾರು 9 ಕೋಟಿ ರೂ. ವೆಚ್ಚದಲ್ಲಿ ನವೀಕರಣಗೊಂಡು ಈಗ ಮತ್ತೊಮ್ಮೆ ನೂತನ ಧ್ವಜಸ್ತಂಭ ಸಹಿತ ಸುತ್ತುಪೌಳಿ ಹಾಗೂ ಇತರ ಅಭಿವೃದ್ಧಿ ಕಾಮಗಾರಿಗಳನ್ನು ಈ ವರ್ಷ ಕೈಗೊಂಡಿದ್ದು ಪುನ‌ರ್ ನಿರ್ಮಾಣಕಾರ್ಯ ಪೂರ್ಣಗೊಂಡ ಹಿನ್ನೆಲೆಯಲ್ಲಿ ಶಿಬರೂರು ಶ್ರೀ ಕ್ಷೇತ್ರದಲ್ಲಿ ಎ.22ರಿಂದ ವಿಶೇಷ ಜಾತ್ರ ಮಹೋತ್ಸವ ಆರಂಭಗೊಂಡಿದ್ದು, ಎಪ್ರಿಲ್ 26ರಂದು ಬೆಳ್ಳಿಗ್ಗೆ ಶ್ರೀ ಉಳ್ಳಾಯ ಕೊಡಮಣಿತ್ತಾಯ ದೈವಗಳಿಗೆ ಬ್ರಹ್ಮಕುಂಭಾಭಿಷೇಕವು ಬ್ರಹ್ಮಶ್ರೀ ವೇದವ್ಯಾಸ ತಂತ್ರಿ, ಶಿಬರೂರುರವರ ನೇತೃತ್ವದಲ್ಲಿ ಜರಗಿತು. ಅದೇ ದಿನ ರಾತ್ರಿ ಕ್ಷೇತ್ರದಲ್ಲಿ ನಾಗಮಂಡಲ ಸೇವೆ ಕೂಡ ಶೃದ್ಧಾ ಭಕ್ತಿಯಿಂದ ಜರಗಿತು.

ಈ ಕ್ಷೇತ್ರವು ದೈವ ಕ್ಷೇತ್ರ ಮಾತ್ರವಲ್ಲದೆ ನಾಗ ಕ್ಷೇತ್ರವು ಆಗಿದ್ದು,. ಕ್ಷೇತ್ರದ ವಿಶೇಷವೇನೆಂದರೆ ಬ್ರಹ್ಮಕುಂಭಾಭಿಷೇನಡೆಯುವ ಸಂದರ್ಭದಲ್ಲಿ ನಾಗಮಂಡಲ ಸೇವೆಯು ನಡೆಯುವುದು ಗಮನಾರ್ಹ.

ಇಂದು ಅಂದರೆ ಎಪ್ರಿಲ್ 27ರಂದು ಮಧ್ಯಾಹ್ನ ಶ್ರೀ ಕ್ಷೇತ್ರದಲ್ಲಿ ಶ್ರೀ ಉಳ್ಳಾಯ ದೈವದ ನೇಮೋತ್ಸವ ಜರಗಿತು. ರಾತ್ರಿ ಕೊಡಮಣಿತ್ತಾಯ ದೈವಗಳ ಕೋಲ ಸೇವೆ ಜರಗಲಿದೆ.

ಈಗಾಗಲೇ ಶಿಬರೂರು ಕೊಡಮಣಿತ್ತಾಯ ದೈವಸ್ಥಾನಕ್ಕೆ ಸುಮಾರು ಎರಡು ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿತ ಚಿನ್ನದ ಪಲ್ಲಕ್ಕಿಯನ್ನು ಕಟೀಲಿನಿಂದ ವೈಭವದ ಮೆರವಣಿಗೆಯಲ್ಲಿ ಕೊಂಡೊಯ್ದು ಶಿಬರೂರು ದೈವಸ್ಥಾನದಲ್ಲಿ ಸಮರ್ಪಿಸಲಾಗಿದೆ. ನೂತನ ಚಿನ್ನ ಪಲ್ಲಕ್ಕಿಯನ್ನು ಭಕ್ತಾದಿಗಳ ಸಹಕಾರದಿಂದ ನಿರ್ಮಿಸಲಾಗಿದೆ. ಸುಮಾರು ಎರಡು ಕೆಜಿಯಷ್ಟು ಬಂಗಾರವನ್ನು ಭಕ್ತಾದಿಗಳೇ ನೀಡಿದ್ದಾರೆ. ಕೊಡಮಣಿತ್ತಾಯನ ಮೇಲಿನ ಭಕ್ತಿಯಿಂದ ಚಿನ್ನದ ಪಲ್ಲಕ್ಕಿಗಾಗಿ ಭಕ್ತರು ತಮ್ಮ ಒಡವೆಯನ್ನೇ ದಾನ ರೂಪವಾಗಿ ನೀಡಿದ್ದಾರೆ.

ಕಟೀಲಿನಿಂದ ಶಿಬರೂರಿಗೆ ನಡೆದ ಮೆರವಣಿಗೆಗೆ ಪಲಿಮಾರು ಶ್ರೀ ವಿದ್ಯಾಧೀಶ ಸ್ವಾಮೀಜಿ, ವೇದವ್ಯಾಸ ತಂತ್ರಿ ಕಟೀಲಿನ ಅಸ್ರಣ್ಣರು, ಕೊಡೆತ್ತೂರು ಗುತ್ತು ಸನತ್ ಕುಮಾರ್ ಶೆಟ್ಟಿ, ಜೀರ್ಣೋದ್ದಾರ ಮತ್ರು ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಏಳಿಂಜೆ ಕೋಂಜಾಲುಗುತ್ತು ಪ್ರಭಾಕರ ಶೆಟ್ಟಿ, ಗುತ್ತಿನಾರ್ ಉಮೇಶ್ ಎನ್ ಶೆಟ್ಟಿ, ಬ್ರಹ್ಮಕಲಶೋತ್ಸವ ಮತ್ತು ಜೀಣೋದ್ದಾರ ಸಮಿತಿಯ ಪದಾಧಿಕಾರಿಗಳು, ಸದಸ್ಯರು, ಶಿಬರೂರು-ಅತ್ತೂರು ಕೊಡೆತ್ತೂರು ಗ್ರಾಮಸ್ಥರು ಉಪಸ್ಥಿತರಿದ್ದರು.

ಶಿಲ್ಪಾ ಶೆಟ್ಟಿಯಿಂದ ಬೆಳ್ಳಿಯ ಕಲಶ ಸಮರ್ಪಣೆ

ಬಾಲಿವುಡ್ ನಟಿ ಶಿಲ್ಪಾಶೆಟ್ಟಿ ಸಹೋದರಿ ಶಮಿತಾ ಶೆಟ್ಟಿಯೊಂದಿಗೆ ಆಗಮಿಸಿ ಶ್ರೀ ಕ್ಷೇತ್ರದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ್. ಇದೇ ವೇಳೆ ಶುಕ್ರವಾರ ಶಿಲ್ಪಾ ಶೆಟ್ಟಿ ಶ್ರೀ ಕ್ಷೇತ್ರಕ್ಕೆ ಬೆಳ್ಳಿಯ ಕಲಶ ನೀಡಿದ್ದಾರೆ.

ಜೀರ್ಣೋದ್ಧಾರ ಮತ್ತು ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ ಶಿಬರೂರು ಗುತ್ತು ಉಮೇಶ್ ಎನ್ ಶೆಟ್ಟಿ, ಜೀರ್ಣೋದ್ದಾರ ಮತ್ತು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷರಾದ ಕೋಂಜಾಲಗುತ್ತು ಪ್ರಭಾಕರ ಎಸ್ ಶೆಟ್ಟಿ,, ತಿಬಾರ್ ಗುತ್ತಿನಾರ್, ಜೀರ್ಣೋದ್ಧಾರ ಮತ್ತು ಬ್ರಹ್ಮಕಲಶೋತ್ಸವ ಸಮಿತಿಕಾರ್ಯಾಧ್ಯಕ್ಷರಾದ *ಪ್ರದ್ಯುಮ್ನ ರಾವ್, ಕೈಯ್ಯೂರಗುತ್ತು, ತುಕಾರಾಮ ಶೆಟ್ಟಿ ಪರ್ಲಬೈಲುಗುತ್ತು, ಕ್ಷೇತ್ರದ ಮೊಕ್ತೇಸರರು ಹಾಗೂ ಬ್ರಹ್ಮಕಲಶೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಎಂ ಮಧುಕರ್ ಅಮೀನ್, ಜೀರ್ಣೋದ್ಧಾರ ಸಮಿತಿ ಮತ್ತು ಬ್ರಹ್ಮಕಲಶೋತ್ಸವ ಸಮಿತಿಯ ಪ್ರಧಾನ ಸಂಚಾಲಕ ಸುಬ್ರಮಣ್ಯ ಪ್ರಸಾದ್ ಕೋರ್ಯಾರು ಮುಂತಾದವರು ಎಲ್ಲಾ ಕಾರ್ಯಕ್ರಮಗಳಲ್ಲಿ ಉಪಸ್ಥಿತರಿದ್ದರು.

Comments are closed.