ಕುಂದಾಪುರ: ಖಾಸಗಿ ಬಸ್‌ಗೆ ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಯುವಕ ಗಂಭೀರ ಗಾಯಗೊಂಡು ಮೃತಪಟ್ಟ ದಾರುಣ ಘಟನೆ ಶನಿವಾರ ಕುಂದಾಪುರ ತಾಲೂಕಿನ ಶೆಟ್ರಕಟ್ಟೆ ತಿರುವಿನಲ್ಲಿ ನಡೆದಿದೆ. ಸೌಕೂರು ನಿವಾಸಿ ವಿಜಯ್ (36) ಮೃತ ಯುವಕ.

ಘಟನೆ ವಿವರ: ತ್ರಾಸಿಯಲ್ಲಿ ಫಾಸ್ಟ್ ಫುಡ್ ಅಂಗಡಿ ನಡೆಸುತ್ತಿದ್ದ ವಿಜಯ್ ಶನಿವಾರ ಬೆಳಿಗ್ಗೆ ಬೈಕಿನಲ್ಲಿ ಆಗಮಿಸಿ ಆಹಾರ ವಸ್ತುಗಳನ್ನು ಖರೀದಿಸಿ ತಲ್ಲೂರು ಮೂಲಕವಾಗಿ ವಾಪಾಸ್ ಸೌಕೂರು ಕಡೆಗೆ ತೆರಳುತ್ತಿದ್ದಾಗ ಶೆಟ್ರಕಟ್ಟೆ ತಿರುವಿನಲ್ಲಿ ಖಾಸಗಿ ಬಸ್‌ವೊಂದನ್ನು ಓವರ್ ಟೇಕ್ ಮಾಡುವಾಗ ಎದುರಿನಿಂದ ಬಂದ್ದ ಇನ್ನೊಂದು ಖಾಸಗಿ ಬಸ್ ಗೆ ಮುಖಾಮುಖಿ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ವಿಜಯ್‌ಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ಸಾಗಿಸುವ ಮಾರ್ಗಮದ್ಯೆ ಮೃತಪಟ್ಟಿದ್ದಾರೆ.
ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.
Comments are closed.