ಕರಾವಳಿ

ಬಾರ್ಕೂರು ಆಳುಪೋತ್ಸವಕ್ಕೆ ಮೆರಗು ನೀಡಿದ ಜಾನಪದ ಜಾತ್ರೆ

Pinterest LinkedIn Tumblr

ಉಡುಪಿ: ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ,ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ತೋಟಗಾರಿಕಾ ಇಲಾಖೆ ಸಹಯೋಗದಲ್ಲಿ ಬಾರ್ಕೂರಿನ ನಂದರಾಯನ ಕೋಟೆಯಲ್ಲಿ ಏರ್ಪಡಿಸಿದ್ದ ಆಳೋಪೋತ್ಸವ ಕಾರ್ಯಕ್ರಮದಲ್ಲಿ ನಾಡಿನ ವಿವಿಧ ಜಾನಪದ ಕಲಾತಂಡಗಳಿಂದ ಜಾನಪದ ಜಾತ್ರೆ ಕಾರ್ಯಕ್ರಮ ಆಯೋಜಿಸಲಾಗಿತ್ತು.

ರಾಜ್ಯದ 30 ರಿಂದ 40 ಕಲಾತಂಡಗಳ ಸುಮಾರು 500 ಕ್ಕೂ ಹೆಚ್ಚು ಕಲಾವಿದರು ವಿವಿಧ ಬಗೆಯ ಜಾನಪದ ಕಲೆಗಳನ್ನು ಒಂದೇ ವೇದಿಕೆಯಲ್ಲಿ ಪ್ರದರ್ಶಿಸಿ, ಆಳುಪೋತ್ಸವ ಕಾರ್ಯಕ್ರಮಕ್ಕೆ ವಿಶೇಷ ಮೆರಗು ತಂದರು.
ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಸಚಿವೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಡಾ. ಜಯಮಾಲಾ, ಅಪರ ಜಿಲ್ಲಾಧಿಕಾರಿ ವಿದ್ಯಾಕುಮಾರಿ , ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಚಂದ್ರಶೇಖರ್ ಮತ್ತಿತರರು ಉಪಸ್ಥಿತರಿದ್ದರು.

ರಂಗ ನಿರ್ದೇಶಕ ಪಿಚ್ಚಳ್ಳಿ ಶ್ರೀನಿವಾಸ್ ಕಾರ್ಯಕ್ರಮ ಈ ಜಾನಪದ ಜಾತ್ರೆಯನ್ನು ನಿರ್ದೇಶಿಸಿದ್ದು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ರಾಜ್ಯಮಟ್ಟದ ಕಾರ್ಯಕ್ರಮ ಇದಾಗಿತ್ತು.

Comments are closed.