ಕರಾವಳಿ

ಪಿಯುಸಿ ಫಲಿತಾಂಶ : ದ.ಕ. ಜಿಲ್ಲೆಗೆ ಪ್ರಥಮ ಸ್ಥಾನ – ಜಿಲ್ಲಾಧಿಕಾರಿಗಳಿಂದ ವಿದ್ಯಾರ್ಥಿಗಳಿಗೆ ಅಭಿನಂದನೆ

Pinterest LinkedIn Tumblr

ಮಂಗಳೂರು, ಜುಲೈ.14: 2019-20 ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದಿರುವುದಕ್ಕೆ ದ.ಕ. ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಅವರು ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ಜಿಲ್ಲೆಯ ವಿದ್ಯಾರ್ಥಿಗಳು ಹಿಂದಿನಿಂದಲೂ ಪರಿಶ್ರಮದ ಅಧ್ಯಯನ ಮಾಡಿ, ಜಿಲ್ಲೆಯಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಕಾರಣರಾಗಿದ್ದಾರೆ. ಉತ್ತಮ ಫಲಿತಾಂಶಕ್ಕೆ ಕೈಜೋಡಿಸಿದ ಹೆತ್ತವರು, ಶಿಕ್ಷಕರು, ಪ್ರಾಂಶುಪಾಲರು, ಕಾಲೇಜು ಸಮಿತಿ, ಪದವಿಪೂರ್ವ ಶಿಕ್ಷಣ ಇಲಾಖೆಗೆ ಅಭಿನಂದನೆಗಳು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ರಾಜ್ಯ ಪದವಿ ಪೂರ್ವ ಶಿಕ್ಷಣ ಇಲಾಖೆ 2019-20 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಮಂಗಳವಾರ ಪ್ರಕಟಿಸಲಾಗಿದ್ದು, . ದಕ್ಷಿಣ ಕನ್ನಡ , ಉಡುಪಿ ಜಿಲ್ಲೆ 90.71% ಫಲಿತಾಂಶದೊಂದಿಗೆ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದುಕೊಂಡಿದೆ. ಎಂದಿನಂತೆ ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.

ಶೇಕಡಾ 81.53 ಫಲಿತಾಂಶದೊಂದಿಗೆ ಕೊಡಗು ಜಿಲ್ಲೆ ದ್ವಿತೀಯ ಸ್ಥಾನದಲ್ಲಿ 56.08 ಶೇಕಡಾದೊಂದಿಗೆ ಚಿತ್ರದುರ್ಗ, ರಾಯಚೂರು ಶೇಕಡಾ 56.23 ಶೇಕಡಾದೊಂದಿಗೆ ಮತ್ತು ವಿಜಯಪುರ 54.22 ಶೇಕಡಾದೊಂದಿಗೆ ಕೊನೆಯ ಮೂರು ಸ್ಥಾನಗಳಲ್ಲಿವೆ.

ಮಾ.4ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿತ್ತು. ಕೋವಿಡ್ 19 ಹಿನ್ನೆಲೆಯಲ್ಲಿ ಮಾ.23ರ ಇಂಗ್ಲಿಷ್‌ ಪರೀಕ್ಷೆ ಮುಂದೂಡಲಾಗಿತ್ತು. ಜೂ. 18ರಂದು ಈ ಪರೀಕ್ಷೆಯನ್ನು ಎಲ್ಲ ಸುರಕ್ಷಾ ಕ್ರಮಗಳೊಂದಿಗೆ ನಡೆಸಲಾಗಿತ್ತು. ಇಂದು ಫಲಿತಾಂಶ ಪ್ರಕಟವಾಗಿದೆ.

ಕಳೆದ ಭಾರಿ ಮೊದಲ ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನ, ದಕ್ಷಿಣ ಕನ್ನಡಕ್ಕೆ ಎರಡನೇ ಸ್ಥಾನ:

ಮಾ.1ರಿಂದ 18ರ ವರೆಗೆ ನಡೆಸಲಾಗಿರುವ 2019ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.92.20 ಫಲಿತಾಂಶದೊಂದಿಗೆ ಉಡುಪಿ ಜಿಲ್ಲೆ ಪ್ರಥಮ ಸ್ಥಾನವನ್ನು ಅಲಂಕರಿಸಿತ್ತು. ಶೇ. 90.91 ಫಲಿತಾಂಶದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆ ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತ್ತು. ಈ ಭಾರಿ ಈ ಎರಡೂ ಜಿಲ್ಲೆಗಳು ರಾಜ್ಯದಲ್ಲೇ ಪ್ರಥಮ ಸ್ಥಾನವನ್ನು ಪಡೆದಿದೆ.

Comments are closed.