ಅಂತರಾಷ್ಟ್ರೀಯ

ಪ್ರಧಾನಿ ಮೋದಿಯವರಿಗೆ ವಿದೇಶಿಯರಿಂದಲೂ ಹರಿದು ಬಂದ ಶುಭಾಶಯಗಳು (ವೀಡಿಯೋ ವೈರಲ್)

Pinterest LinkedIn Tumblr

ಪ್ರಧಾನಿ ಮೋದಿಯವರಿಗೆ 70ನೇ ಹುಟ್ಟುಹಬ್ಬದ ಸಂಭ್ರಮ: ದೇಶ-ವಿದೇಶಗಳಿಂದ ಹರಿದು ಬರುತ್ತಿರುವ ಶುಭಾಶಯ (ವೀಡಿಯೋ ವೈರಲ್)

ಮಂಗಳೂರು, ಸೆಪ್ಟಂಬರ್.17: ಇಂದು (ಸೆಪ್ಟಂಬರ್.17) ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು 70ನೇ ಹುಟ್ಟುಹಬ್ಬದ ಸಂಭ್ರಮ.

71ನೇ ವಸಂತಕ್ಕೆ ಕಾಲಿಡುತ್ತಿರುವ ಶ್ರೀ ಮೋದಿಯವರಿಗೆ ದೇಶ- ವಿದೇಶಗಳಿಂದ ಶಭಾಶಯಗಳು ಹರಿದು ಬರುತ್ತಿದೆ. ನೇಪಾಳ ಪ್ರಧಾನಮಂತ್ರಿ ಕೆ.ಪಿ.ಶರ್ಮಾ, ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಸೇರಿದಂತೆ ಬಹುತೇಕ ದೇಶದ ನಾಯಕರು ಮೋದಿಯವರಿಗೆ ಶುಭಾಶಯಗಳನ್ನು ಕೋರುತ್ತಿದ್ದಾರೆ

ಇನ್ನು 71ನೇ ವಸಂತಕ್ಕೆ ಕಾಲಿಡುತ್ತಿರುವ ಪ್ರಧಾನಿ ನರೇಂದ್ರ ಮೋದಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಕೇಂದ್ರ ಸರ್ಕಾರದ ಸಚಿವರು, ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು, ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸೇರಿದಂತೆ ಹಲವು ಗಣ್ಯರು ಶುಭಾಶಯ ಕೋರಿದ್ದಾರೆ.

ವಿದೇಶಿಯರ ವೀಡಿಯೋ ವೈರಲ್ :

ಇದೇ ವೇಳೆ ವಿವಿಧ ರಾಷ್ಟ್ರಗಳ ಪ್ರಜೆಗಳು (ವಿದೇಶಿಯರ ಗೊಂಪೊಂದು) ಪ್ರಧಾನಿ ಮೋದಿಯವರಿಗೆ ಶುಭಾಶಯ ಸಲ್ಲಿಸಿದ್ದು, ಈ ವೀಡಿಯೋ ಇದೀಗ ಸಾಮಾಜಿಕ ಜಲತಾಣಗಳಲ್ಲಿ ವೈರಲ್ ಆಗಿದೆ.

ಪ್ರಧಾನಿ ಮೋದಿಯವರಿಗೆ ಜನ್ಮದಿನದ ಶುಭಾಶಯ ಸಲ್ಲಿಸಿರುವ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು, ನಿಮ್ಮ ನಾಯಕತ್ವದಲ್ಲಿ ಭಾರತ ಆರ್ಥಿಕ, ಸಾಮಾಜಿಕ ಮತ್ತು ತಂತ್ರಜ್ಞಾನದ ಕ್ಷೇತ್ರದಲ್ಲಿ ಅದ್ಭುತ ಸಾಧನೆ ಮಾಡಿದೆ. ಪ್ರಧಾನಮಂತ್ರಿಯಾಗಿ ನೀವು ಮಾಡಿದ ಸಾಧನೆಯೂ ಅಂತಾರಾಷ್ಟ್ರೀಯ ಮಟ್ಟದ ಗೌರವಕ್ಕೆ ಪಾತ್ರವಾಗಿದೆ ಎಂದು ಶ್ಲಾಘಿಸಿದ್ದಾರೆ. ಇದೇ ವೇಳೆ ಜನ್ಮದಿನ ಆಚರಿಸುತ್ತಿರುವ ತಾವು ಆರೋಗ್ಯವಂತರಾಗಿ, ಸುಖ-ಸಂತೋಷದಿಂದ ದೀರ್ಘಕಾಲ ಬಾಳಿ ಎಂದು ಹಾರೈಸುತ್ತ್ರುವುದಾಗಿ ಪುಟಿನ್ ತಿಳಿಸಿದ್ದಾರೆ.

ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಜಿ ಅವರಿಗೆ ಆತ್ಮೀಯ ಶುಭಾಶಯಗಳು. ಉಭಯ ದೇಶಗಳ ನಡುವಿನ ಸಂಬಂಧವನ್ನು ಮತ್ತಷ್ಟು ಬಲಪಡಿಸಲು ಒಟ್ಟಾಗಿ ಕೆಲಸವನ್ನು ಮುಂದುವರಿಸುಸೋಣ ಎಂದು ಹೇಳಿರುವ ನೇಪಾಳದ ಪ್ರಧಾನಮಂತ್ರಿ ಕೆ.ಪಿ.ಶರ್ಮಾ ಅವರು, ನಾನು ಸದಾ ನಿಮ್ಮ ಸಂತೋಷ ಹಾಗೂ ಉತ್ತಮ ಆರೋಗ್ಯವನ್ನು ಬಯಸುತ್ತೇನೆ ಎಂದು ಹೇಳಿದ್ದಾರೆ.

ಪ್ರಧಾನಿ ಮೋದಿಯವರ ನಾಯಕತ್ವದಲ್ಲಿ ಸಮಾಜದ ಬಡ ಮತ್ತು ವಂಚಿತರಿಗೆ ದುರ್ಬಲರಿಗೆ ಗೌರವ ಜೀವನ ಕಲ್ಪಿಸಲಾಗಿದೆ. ಅವರು ದೇಶ ಸೇವೆ, ಬಡವರ ಕಲ್ಯಾಣಕ್ಕಾಗಿಯೇ ತಮ್ಮ ಇಡಿ ಜೀವನ ಮೀಸಲಿಟ್ಟಿದ್ದಾರೆ.ರಾಷ್ಟ್ರದ ಸೇವೆ ಮತ್ತು ಬಡವರ ಕಲ್ಯಾಣಕ್ಕೆ ಮೀಸಲಾಗಿರುವ ದೇಶದ ಅತ್ಯಂತ ಜನಪ್ರಿಯ ನಾಯಕ- ಪ್ರಧಾನಿಗೆ ನನ್ನ ಜನ್ಮದಿನದ ಶುಭಾಶಯಗಳು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ಕ್ರಿಕೆಟ್ ತಾರೆಗಳಿಂದಲೂ ಶುಭಾಶಯ :

ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ, ದಿಗ್ಗಜ ಸಚಿನ್ ತೆಂಡುಲ್ಕರ್, ರಾಷ್ಟ್ರೀಯ ತಂಡದ ಮುಖ್ಯಕೋಚ್ ರವಿ ಶಾಸ್ತ್ರಿ, ರಿಯೋ ಒಲಿಂಪಿಕ್ಸ್ ಪದಕ ವಿಜೇತೆ ಸಾಕ್ಷಿ ಮಲಿಕ್, ಕನ್ನಡಿಗ ಕೆಎಲ್ ರಾಹುಲ್, ಶಿಖರ್ ಧವನ್, ಮಾಜಿ ಆಲ್ರೌಂಡರ್ ಯುವರಾಜ್ ಸಿಂಗ್, ಮಾಜಿ ಆಟಗಾರರಾದ ಸುರೇಶ್ ರೈನಾ, ಅನಿಲ್ ಕುಂಬ್ಳೆ, ಗೌತಮ್ ಗಂಭೀರ್, ಗೀತಾ ಪೋಗಟ್, ಬಾಕ್ಸರ್ ವಿಜೇಂದರ್ ಸಿಂಗ್ ಸೇರಿದಂತೆ ಹಲವು ಸ್ಟಾರ್ ಕ್ರೀಡಾಪಟುಗಳು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ 70ನೇ ವರ್ಷದ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿದ್ದಾರೆ. ಇವರೆಲ್ಲಾ ಟ್ವಿಟರ್‌ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಮೋದಿಗೆ ಶುಭಾಶಯ ಹೇಳಿದ್ದಾರೆ.

sk

Comments are closed.