ಕರ್ನಾಟಕ

ವಿಶ್ವವಿಖ್ಯಾತ ‘ಮೈಸೂರು ದಸರಾ’ ಮಹೋತ್ಸವಕ್ಕೆ ಚಾಲನೆ ನೀಡಿದ ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ

Pinterest LinkedIn Tumblr

ಮೈಸೂರು: ವಿಶ್ವವಿಖ್ಯಾತ, ನಾಡ ಹಬ್ಬವೆಂದು ಪ್ರಖ್ಯಾತಿಯಾದ ‘ಮೈಸೂರು ದಸರಾ -2021’ರ ಮಹೋತ್ಸವಕ್ಕೆ ಅಧಿಕೃತ ಚಾಲನೆ ಸಿಕ್ಕಿದೆ. ಧೀಮಂತ ನಾಯಕ, ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರು 411ನೇ ನಾಡಹಬ್ಬ ದಸರಾ ಹಬ್ಬಕ್ಕೆ ಗುರುವಾರ ಚಾಲನೆ ನೀಡಿದರು.

ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ, ಚಾಮುಂಡಿ ಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿಗೆ ದೀಪಾ ಬೆಳಗುವ ಮೂಲಕ ಐತಿಹಾಸಿಕ ದಸರಾ ಮಹೋತ್ಸವಕ್ಕೆ ಚಾಲನೆ ನೀಡಿದರು.

ಚಾಮುಂಡಿ ಬೆಟ್ಟದಲ್ಲಿ ಶ್ರೀ ಚಾಮುಂಡೇಶ್ವರಿ ದೇವಿಗೆ ಅಗ್ರಪೂಜೆಯೊಂದಿಗೆ ಬೆಳಗ್ಗೆ 8.15ರಿಂದ 8.45ರ ಸಲ್ಲುವ ಶುಭ ಮುಹೂರ್ತದಲ್ಲಿ ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅವರು ದಸರಾಗೆ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ, ಸಚಿವರಾದ ಎಸ್.ಟಿ.ಸೋಮಶೇಖರ್, ಆರ್.ಅಶೋಕ್, ಬಿ.ಸಿ.ಪಾಟೀಲ್, ಶಿವರಾಂ ಹೆಬ್ಬಾರ್, ಸುನೀಲ್ ಕುಮಾರ್, ನಾರಾಯಣ ಗೌಡ, ಭೈರತಿ ಬಸವರಾಜು, ಶಶಿಕಲಾ ಜೊಲ್ಲೆ, ಶಾಸಕರಾದ ಜಿಟಿಡಿ, ರಾಮದಾಸ್, ನಾಗೇಂದ್ರ, ಬೆಲ್ಲದ್, ತನ್ವೀರ್ ಸೇಠ್, ಹೆಚ್​.ವಿಶ್ವನಾಥ್, ಸಂಸದ ಪ್ರತಾಪ್ ಸಿಂಹ, ಜಿಲ್ಲಾಧಿಕಾರಿ, ಪೊಲೀಸ್ ಆಯುಕ್ತರು ಸೇರಿ ನಿಗಮ ಮಂಡಳಿ ಅಧ್ಯಕ್ಷರ ಹಲವರ ಉಪಸ್ಥಿತರಿದ್ದರು.

ಸಂಜೆ 6ಕ್ಕೆ ಅರಮನೆ ಆವರಣದಲ್ಲಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದಾರೆ. ಇದೇ ವೇಳೆ ಆನಂದ್‌ ಅವರಿಗೆ ಸಂಗೀತ ವಿದ್ವಾನ್‌ ಪ್ರಶಸ್ತಿ ಪ್ರದಾನ ಮಾಡುವರು. ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ, ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಮುಖ್ಯ ಅತಿಥಿಗಳಾಗಿರುವರು. ಶಾಸಕ ಎಸ್‌.ಎ.ರಾಮದಾಸ್‌ ಅಧ್ಯಕ್ಷತೆ ವಹಿಸುವರು.

Comments are closed.