ಕರ್ನಾಟಕ

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಐತಿಹಾಸಿಕ ಜಂಬೂ ಸವಾರಿಗೆ ಸಿಎಂ ಬಸವರಾಜ ಬೊಮ್ಮಾಯಿ ಚಾಲನೆ

Pinterest LinkedIn Tumblr

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಐತಿಹಾಸಿಕ ಜಂಬೂ ಸವಾರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು.

3ನೇ ಬಾರಿಗೆ ಅಭಿಮನ್ಯು ಆನೆ ದೇವಿ ಚಾಮುಂಡೇಶ್ವರಿ ವಿರಾಜಮಾನಳಾಗಿರುವ 750 ಕೆಜಿ ತೂಕದ ಚಿನ್ನದ ಅಂಬಾರಿ ಹೊತ್ತು ಸಾಗಿದೆ. ಅಭಿಮನ್ಯುವಿನೊಂದಿಗೆ ಅರ್ಜುನ ನಿಶಾನೆ ಆನೆ, ಚೈತ್ರ ಮತ್ತು ಕಾವೇರಿ ಕುಮ್ಕಿ ಆನೆಗಳಾಗಿ ಜಂಬೂ ಸವಾರಿಯಲ್ಲಿ ಒಟ್ಟು 9 ಆನೆಗಳು ರಾಜ ಬೀದಿಗಳಲ್ಲಿ ಸಾಗಿತು. ಅರಮನೆಯಿಂದ ಬನ್ನಿಮಂಟಪದವರೆಗೆ ಬಂಜೂಸವಾರಿ ಸಾಗಿತು.

ಎರಡು ವರ್ಷ ಕೊರೋನಾದಿಂದ ಕಳೆಗುಂದಿದ್ದ ಮಹೋತ್ಸವ ಈ ಭಾರಿ ಬಹಳ ವಿಜೃಂಭಣೆಯಿಂದ ನಡೆಯಿತು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮೈಸೂರು ದಸರಾಕ್ಕೆ ಚಾಲನೆ ನೀಡಿದ್ದರು.

Comments are closed.