ಪ್ರಮುಖ ವರದಿಗಳು

ಚಂದ್ರನ ಮೇಲೆ ಯಶಸ್ವಿಯಾಗಿ ಇಳಿದ ವಿಕ್ರಮ್ ಲ್ಯಾಂಡರ್: ಚಂದ್ರಯಾನ-3ರಲ್ಲಿ ಭಾರತ ಯಶಸ್ವಿ

Pinterest LinkedIn Tumblr

ಬೆಂಗಳೂರು: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ(ಇಸ್ರೋ) ಮೂರನೇ ಚಂದ್ರಯಾನ-3ರ ವಿಕ್ರಮ್ ಲ್ಯಾಂಡರ್ ಇಂದು ಸಂಜೆ ಸುಮಾರು 6.04 ಕ್ಕೆ ಚಂದ್ರನ ಮೇಲ್ಮೈಯಲ್ಲಿ ಯಶಸ್ವಿಯಾಗಿ ಲ್ಯಾಂಡಿಂಗ್ ಮಾಡಿದೆ.

ಜುಲೈ 14ರಂದು ಉಡಾವಣೆಗೊಂಡಿದ್ದ ಚಂದ್ರಯಾನ 3 ಇಂದು ಸಂಜೆ 6.04ಕ್ಕೆ ಸರಿಯಾಗಿ ಚಂದ್ರನ ಮೇಲ್ಮೈ ಮೇಲೆ ಸಾಫ್ಟ್ ಲ್ಯಾಂಡ್ ಆಗಿದೆ. ಚಂದ್ರನ ದಕ್ಷಿಣ ಧ್ರುವದಲ್ಲಿ ನೌಕೆಯನ್ನು ಸುಸೂತ್ರವಾಗಿ ಇಳಿಸಿದ ಮೊದಲ ದೇಶವಾಗಿ ಭಾರತ ಹೊರಹೊಮ್ಮಿದೆ.

ಚಂದ್ರಯಾನ-3ರ ಲ್ಯಾಂಡರ್‌ನ ಸಾಫ್ಟ್ ಲ್ಯಾಂಡಿಂಗ್‌ಗೆ 15 ರಿಂದ 17 ನಿಮಿಷಗಳನ್ನು ತೆಗೆದುಕೊಂಡಿತು. ಚಂದ್ರಯಾನ 3 ಅನ್ನು 14 ಜುಲೈ 2023ರಂದು ಮಧ್ಯಾಹ್ನ 2.30 ಕ್ಕೆ ಉಡಾವಣೆ ಮಾಡಲಾಗಿತ್ತು.

ಚಂದ್ರನ ದಕ್ಷಿಣ ಧ್ರುವವನ್ನು ಚಂದ್ರಯಾನ 3ಕ್ಕೆ ಇಳಿಯುವ ಸ್ಥಳವಾಗಿ ನಿಗದಿಪಡಿಸಲಾಗಿತ್ತು. ಇದು ಶಾಶ್ವತ ನೆರಳಿನ ಪ್ರದೇಶವಾಗಿದ್ದು, ವಿಜ್ಞಾನಿಗಳು ಇಲ್ಲಿ ಸಂಪನ್ಮೂಲಗಳು ಸಮೃದ್ಧವಾಗಿದೆ. ಭವಿಷ್ಯದಲ್ಲಿ ಮಾನವಸಹಿತ ಕಾರ್ಯಾಚರಣೆಗಳಿಗೆ ಸೂಕ್ತವಾದ ಲ್ಯಾಂಡಿಂಗ್ ಸೈಟ್ಗಳನ್ನು ನೀಡಬಹುದು ಎಂದು ನಂಬಿದ್ದಾರೆ.

ವಿಕ್ರಮ್ ಲ್ಯಾಂಡರ್ ಚಂದ್ರನ ಈ ಪ್ರದೇಶದಲ್ಲಿ ಮೊದಲ ಬಾರಿಗೆ ಇಳಿಯುವ ಮೂಲಕ ಇತಿಹಾಸ ನಿರ್ಮಿಸಿದೆ. ಲ್ಯಾಂಡರ್ ಮತ್ತು ರೋವರ್ ಒಂದು ಚಂದ್ರನ ದಿನದ (14 ಭೂಮಿಯ ದಿನಗಳು) ಮಿಷನ್ ಜೀವನವನ್ನು ಹೊಂದಿದ್ದು, ಈ ಸಮಯದಲ್ಲಿ ಅದು ಆನ್-ಸೈಟ್ ಪ್ರಯೋಗಗಳನ್ನು ನಡೆಸುತ್ತದೆ.

Comments are closed.