ಕರ್ನಾಟಕ

ಹಲವು ದಶಕಗಳ ಕನಸು ಇಂದು ನನಸು; ಬಾಲ ರಾಮನ ವಿಗ್ರಹ ಪ್ರಾಣಪ್ರತಿಷ್ಠೆಯ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಯ್ತು ಅಯೋಧ್ಯೆ

Pinterest LinkedIn Tumblr

ಅಯೋಧ್ಯೆ: 5 ಶತಮಾನಗಳ ಹೋರಾಟ, ಹಲವು ವರ್ಷಗಳ ಕನಸು ಇಂದು (ಜ.22) ಸೋಮವಾರ ನನಸಾಗಿದೆ. ಅಯೋಧ್ಯೆ ರಾಮಮಂದಿರ ಉದ್ಘಾಟನೆಯಾಗಿ, ರಾಮಲಲ್ಲಾ (ಬಾಲ ರಾಮ) ವಿಗ್ರಹಕ್ಕೆ ಪ್ರಾಣಪ್ರತಿಷ್ಠಾಪನೆ ನೆರವೇರಿಸಲಾಗಿದೆ.

ಸುಮಾರು 496 ವರ್ಷಗಳಿಂದ ಭಾರತದ ಕೋಟ್ಯಂತರ ನಾಗರಿಕರು ಕಾಣುತ್ತಿದ್ದ ರಾಮಮಂದಿರದಲ್ಲಿಂದು ಸಂಭ್ರಮ ಮೇಳೈಸಿದೆ. ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ನಿರ್ಮಿಸಲಾಗಿರುವ ಭವ್ಯ ರಾಮಮಂದಿರದಲ್ಲಿ ರಾಮಲಲ್ಲಾನಿಗೆ ಪ್ರಾಣಪ್ರತಿಷ್ಠಾಪನೆ ನೆರವೇರಿಸುವ ಮೂಲಕ ರಾಮಮಂದಿರವು ಉದ್ಘಾಟನೆಯಾದಂತಾಗಿದೆ.

ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಉ.ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ರಾಜ್ಯಪಾಲೆ ಆನಂದಿ ಬೆನ್ ಪಟೇಲ್, ಆರ್.ಎಸ್.ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಉಪಸ್ಥಿತರಿದ್ದರು. ಕೋಟ್ಯಾಂತರ ಮಂದಿ ಈ ಅದ್ಬುತ ಗಳಿಗೆಯನ್ನು ನೇರ ಪ್ರಸಾರದಲ್ಲಿ ವೀಕ್ಷಿಸಿದರು.

Comments are closed.