ಕರಾವಳಿ

ಪಡುಬಿದ್ರೆ ಬ್ಲೂ ಫ್ಲ್ಯಾಗ್ ಬೀಚ್- ನಾಳೆಯಿಂದ (ಡಿ.17) ಪ್ರವಾಸಿಗರ ಪ್ರವೇಶಕ್ಕೆ ಮುಕ್ತ

Pinterest LinkedIn Tumblr

ಉಡುಪಿ: ಮಿನಿಸ್ಟ್ರೀ ಆಫ್ ಎನ್ವಿರರ್ನಮೆಂಟ್, ಫಾರೆಸ್ಟ್ ಆಂಡ್ ಕ್ಲೆೈಮೇಟ್ ಚೇಂಜ್ ಹಾಗೂ ಸೊಸೈಟಿ ಫಾರ್ ಇಂಟಿಗ್ರೇಟೆಡ್ ಕೋಸ್ಟಲ್ ಮ್ಯಾನೇಜ್‌ಮೆಂಟ್ ರವರ ಸಹಯೋಗದೊಂದಿಗೆ ಜಿಲ್ಲಾಡಳಿತವು ಪರಿಸರ ಮಂತ್ರಾಲಯರವರ ಬ್ಲೂ ಫ್ಲ್ಯಾಗ್ ಸರ್ಟಿಫಿಕೇಶನ್ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿರುತ್ತದೆ.

ಪ್ರಸ್ತುತ ಈ ಕಡಲ ತೀರವು ಬ್ಲೂ ಫ್ಲ್ಯಾಗ್ ಅಂತರಾಷ್ಟ್ರೀಯ ಮಾನ್ಯತೆಯನ್ನು ಹೊಂದಿದ್ದು, ಈ ಕಡಲ ತೀರವನ್ನು ಡಿಸೆಂಬರ್ 17 ರಿಂದ ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಪ್ರವಾಸಿಗರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ.

ಪ್ರವಾಸಿಗರು ತಮ್ಮ ಪ್ರವಾಸಾನುಭೂತಿಗೆ ಹಾಗೂ ಕಡಲ ತೀರಗಳ ಸುಂದರ ಚಟುವಟಿಕೆಗಳನ್ನು ಆಸ್ವಾದಿಸಲು ಪಡುಬಿದ್ರೆ ಎಂಡ್ ಪಾಯಿಂಟ್ ಬೀಚ್ ಅನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಮಾನ್ಯತೆ ಹೊಂದಿದ ಸುಸಜ್ಜಿತ ಬೀಚ್‌ಅನ್ನಾಗಿ ಅಭಿವೃದ್ಧಿಪಡಿಸಲಾಗಿದೆ ಎಂದು ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿಯ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಜಿ. ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Comments are closed.