ಕರಾವಳಿ

ಉಡುಪಿ ಜಿಲ್ಲೆಯಲ್ಲಿ ಬಹಳಷ್ಟು ಮುಂಜಾಗೃತೆಯೊಂದಿಗೆ ಆರಂಭಗೊಂಡ 2nd ಪಿಯುಸಿ ಪರೀಕ್ಷೆ

Pinterest LinkedIn Tumblr

ಉಡುಪಿ: ಉಡುಪಿ ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆಯು ಕೊರೋನಾ ಆತಂಕದ ಹಿನ್ನೆಲೆ ಮುಂಜಾಗೃತಾ ಕ್ರಮಗಳನ್ನು ಅನುಸರಿಸಿಕೊಂಡು 27 ಪರೀಕ್ಷಾ ಕೇಂದ್ರಗಳಲ್ಲಿ ನಡೆಯುತ್ತಿದೆ. ಜಿಲ್ಲೆಯಲ್ಲಿ ಪರೀಕ್ಷೆಗೆ ಒಟ್ಟು 13562 ವಿದ್ಯಾರ್ಥಿಗಳು ಪರೀಕ್ಷೆಗೆ ನೊಂದಣಿ ಮಾಡಿಕೊಂಡಿರುತ್ತಾರೆ. 6414 ಬಾಲಕರು ವಿದ್ಯಾರ್ಥಿಗಳು 7149 ಬಾಲಕಿಯರು ಪರೀಕ್ಷೆ ಬರೆಯಲು ನೊಂದಾಯಿಸಿದ್ದರು.

ಕೋವಿಡ್-19 ಹಿನ್ನಲೆಯಲ್ಲಿ ವಿದ್ಯಾರ್ಥಿಗಳನ್ನು ಸೋಂಕು ಲಕ್ಷಣಗಳನ್ನು ಪರೀಕ್ಷಿಸಿ ಪರೀಕ್ಷಾ ಕೇಂದ್ರದ ಒಳಗೆ ಬಿಡಬೇಕಾಗಿರುವುದರಿಂದ ವಿದ್ಯಾರ್ಥಿಗಳು ಗುರುವಾರ ಬೆಳಿಗ್ಗೆ 9ಗಂಟೆಗೆ ಪರೀಕ್ಷಾ ಕೇಂದ್ರಗಳಿಗೆ ಆಗಮಿಸಿದ್ದರು.

 

ಬುಧವಾರವೇ ಪರೀಕ್ಷಾ ಕೇಂದ್ರಗಳಿಗೆ ಸೋಂಕು ನಿವಾರಣಾ ದ್ರಾವಣ ಸಿಂಪಡಿಸಿ ಪರೀಕ್ಷಾ ಕೇಂದ್ರದ ಕೊಠಡಿ ಮತ್ತು ಡೆಸ್ಕ್ ಗಳನ್ನು ಸ್ವಚ್ಛಗೊಳಿಸಿ ಶುದ್ಧಿಕರಿಸಲಾಗಿತ್ತು. ಗುರುವಾರ ಪರೀಕ್ಷೆ ಬರೆಯಲು ಮಾಸ್ಕ್ ಧರಿಸಿ ಆಗಮಿಸಿದ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರದ ಒಳಗೆ ಬರುವಾಗ ವಿದ್ಯಾರ್ಥಿಗಳಿಗೆ ವೈದ್ಯಕೀಯ ಸಿಬ್ಬಂದಿಗಳಿಂದ ಥರ್ಮಲ್ ಸ್ಕ್ಯಾನರನಿಂದ ಪರೀಕ್ಷಿಸಿ, ನೀರು ಮತ್ತು ಸಾಬುನಿನಿಂದ ಕೈತೊಳೆದು ಪರೀಕ್ಷಾ ಕೊಠಡಿಗೆ ಪ್ರವೇಶ ನೀಡಲಾಗಿತ್ತು. ಉಡುಪಿ ಡಿಸಿ ಜಿ. ಜಗದೀಶ್, ಕುಂದಾಪುರ ಉಪವಿಭಾಗಾಧಿಕಾರಿ ಕೆ. ರಾಜು, ಡಿಡಿಪಿಐ ಸೇರಿದಂತೆ ವಿವಿಧ ಅಧಿಕಾರಿಗಳು ಪರೀಕ್ಷಾ ಕೇಂದ್ರಕ್ಕೆ ತೆರಳಿ ಪರಿಶೀಲಿಸಿದ್ದಲ್ಲದೆ ಪೋಷಕರು ಮತ್ತು ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದರು.

ಜ್ವರ-ಕೆಮ್ಮು ನೆಗಡಿ ಇತ್ಯಾದಿಗಳಿರುವುದು ಲಕ್ಷಣಗಳನ್ನು ಕಂಡು ಬಂದ ವಿದ್ಯಾರ್ಥಿಗಳನ್ನು ಪ್ರತ್ಯೇಕಿಸಿ ಅವರನ್ನು ಪ್ರತ್ಯೇಕವಾದ ಕೊಠಡಿಯಲ್ಲಿ ಪರೀಕ್ಷೆ ಬರೆಯಲು ಅವಕಾಶ ಮಾಡಲಾಗಿತ್ತು. ಕಂಟೆನ್ಮೆಂಟ್ ಜೋನ್ ನಿಂದ ಬಂದ ವಿದ್ಯಾರ್ಥಿಗಳನ್ನು ಪ್ರತ್ಯೇಕ ಕೊಠಡಿಯಲ್ಲಿ ಕೂರಿಸಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿತ್ತು .

ಕಾರ್ಕಳ ತಾಲೂಕಿನಲ್ಲಿ ಎಸ್.ವಿ.ಟಿ. ಪದವಿ ಪೂರ್ವ ಕಾಲೇಜು, ಕಾರ್ಕಳ, ಇವರು ಎಸ್.ವಿ.ಟಿ. ಪ್ರಥಮ ದರ್ಜೆ ಕಾಲೇಜು, ಕಾರ್ಕಳ, ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು, ಕಾರ್ಕಳ : ಇವರು ಕ್ರೈಸ್ಟಕಿಂಗ್ ಪದವಿ ಪೂರ್ವ ಕಾಲೇಜು, ಕಾರ್ಕಳ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು, ಬಿದ್ಕಲಕಟ್ಟೆ ಇವರು ಅದೇ ಕಾಲೇಜಿನ ಕರ್ನಾಟಕ ಪಬ್ಲಿಕ ಶಾಲೆ, ಬಿದ್ಕಲಕಟ್ಟೆ . ಈ 3 ಹೆಚ್ಚುವರಿ ಬ್ಲಾಕ್‌ಗಳನ್ನು ಮಾಡಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ ಹೆಚ್ಚು ವಿದ್ಯಾರ್ಥಿಗಳ ಸಂಖ್ಯೆ 3 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ.

ಜಿಲ್ಲೆಯಲ್ಲಿ ಸಂಪೂರ್ಣವಾಗಿ ಬಸ್ ಸಂಚಾರ ಇಲ್ಲದಿರುವುದರಿಂದ ಒಟ್ಟು 69 ಮಾರ್ಗಗಳಲ್ಲಿ 91 ಕೆ.ಎಸ್.ಆರ್.ಟಿ. ಬಸ್‌ಗಳನ್ನು ಬಳಸಲಾಗಿದ್ದು ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಈ ಬಸ್ ಮೂಲಕ ಬಹಳಷ್ಟು ಅನುಕೂಲವಾಗಿತ್ತು. ಹಲವು ವಿದ್ಯಾರ್ಥಿಗಳನ್ನು ಪೋಷಕರು ಖಾಸಗಿ ವಾಹನಗಳಲ್ಲಿ ಕರೆತಂದು ಪರೀಕ್ಷಾ ಕೇಂದ್ರಕ್ಕೆ ಕರೆತಂದು ಬಿಟ್ಟಿದ್ದು 10.15ಕ್ಕೆ ಪರೀಕ್ಷೆ ಆರಂಭವಾಗುವವರೆಗೂ ಕೇಂದ್ರದ ಹೊರಭಾಗದಲ್ಲಿ ನಿಂತು ಕಾದ ದೃಶ್ಯ ಕಂಡುಬಂತು. ಜಿಲ್ಲೆಯಲ್ಲಿ ನಡೆಯುವ ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆಯ ಮಾಹಿತಿಯನ್ನು ಪಡೆಯಲು ಸಾರ್ವಜನಿಕರಿಗೆ ಸಹಾಯವಾಣಿ ಕೇಂದ್ರವನ್ನು ತೆರೆಯಲಾಗಿತ್ತು.

(ವರದಿ- ಯೋಗೀಶ್ ಕುಂಭಾಸಿ)

Comments are closed.