(ವರದಿ- ಯೋಗೀಶ್ ಕುಂಭಾಸಿ)
ಬೆಂಗಳೂರು: ಕರ್ನಾಟಕದ ಅತ್ಯುನ್ನತ ನಾಗರಿಕ ಪ್ರಶಸ್ತಿ ‘ಕರ್ನಾಟಕ ರತ್ನ’ವನ್ನು ಪುನೀತ್ ರಾಜ್ಕುಮಾರ್ ಅವರಿಗೆ ಸರಕಾರ ನೀಡಲು ನಿರ್ಧರಿಸಿದೆ. ಈ ಬಗ್ಗೆ ಬೆಂಗಳೂರು ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ನಡೆದ ‘ಪುನೀತ ನಮನ’ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.

ಕರ್ನಾಟಕ ರತ್ನ ಪ್ರಶಸ್ತಿ ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾಗಿದೆ. ಇಲ್ಲಿಯವರೆಗೆ 9 ಜನ ಗಣ್ಯರಿಗೆ ಈ ಪ್ರಶಸ್ತಿ ಸಂದಿದೆ. ಮರಣೋತ್ತರವಾಗಿ ಈ ಪ್ರಶಸ್ತಿ ಪಡೆಯುತ್ತಿರುವ ಪುನೀತ್ ರಾಜ್ಕುಮಾರ್ ಈ ಗೌರವಕ್ಕೆ ಪಾತ್ರರಾದ 10ನೇ ವ್ಯಕ್ತಿಯಾಗಿದ್ದಾರೆ.

ಈ ಮೊದಲು ಕರ್ನಾಟಕ ರತ್ನ ಪ್ರಶಸ್ತಿ ಪಡೆದವರ ವಿವರವಿಲ್ಲಿದೆ…
ಕುವೆಂಪು (1992), ಡಾ.ರಾಜ್ಕುಮಾರ್ (1992), ಎಸ್.ನಿಜಲಿಂಗಪ್ಪ (1999), ಸಿ.ಎನ್.ಆರ್.ರಾವ್ (2000), ಡಾ. ದೇವಿ ಪ್ರಸಾದ್ ಶೆಟ್ಟಿ (2001), ಭೀಮಸೇನ ಜೋಷಿ (2005), ಶಿವಕುಮಾರ ಸ್ವಾಮೀಜಿ (2007), ದೇ.ಜವರೇಗೌಡ (2008), ಡಾ. ಡಿ.ವೀರೇಂದ್ರ ಹೆಗ್ಗಡೆ (2009) ಪಡೆದಿದ್ದು 10ನೇ ಸಾಧಕರಾಗಿ ಸಿನೆಮಾ ಹಾಗೂ ಸಾಮಾಜಿಕ ಸೇವೆಯಲ್ಲಿ ಪುನೀತ್ ರಾಜಕುಮಾರ್ ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಈ ಪ್ರಶಸ್ತಿಯು 50 ಗ್ರಾಂ ತೂಕದ ಚಿನ್ನದ ಪದಕ, ಸನ್ಮಾನ ಪತ್ರ, ನೆನಪಿನ ಕಾಣಿಕೆ ಮತ್ತು ಒಂದು ಶಾಲನ್ನು ಒಳಗೊಂಡಿರುತ್ತದೆ.
Comments are closed.