ಕರಾವಳಿ

ರಸ್ತೆಯಲ್ಲಿ ಸಿಕ್ಕ 10 ಸಾವಿರ ಮರಳಿಸಿದ ಕುಂದಾಪುರ ಕೋಣಿ ಶಾಲೆ ವಿದ್ಯಾರ್ಥಿನಿಯರ ಕಾರ್ಯಕ್ಕೆ ಶಿಕ್ಷಣ ಸಚಿವರ ಮೆಚ್ಚುಗೆ

Pinterest LinkedIn Tumblr

ಕುಂದಾಪುರ: ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಕೋಣಿ ಪ್ರೌಢಶಾಲೆಯ ಸಮೀಪ ಸಾರ್ವಜನಿಕ ರಸ್ತೆಯಲ್ಲಿ ಸಿಕ್ಕಿದ ಹತ್ತು ಸಾವಿರ ರೂ. ಹಣವನ್ನು ಪ್ರೌಢಶಾಲಾ ವಿದ್ಯಾರ್ಥಿನಿಯರಾದ ಶ್ರಾವ್ಯಾ, ಐಶ್ವರ್ಯ ಜೆ., ಪ್ರಸ್ತುತಿ ಮತ್ತು ವೈಷ್ಣವಿ ಅವರು ಹಣ ಕಳೆದುಕೊಂಡ ಸುಲೇಖಾ ಅವರಿಗೆ ಹಸ್ತಾಂತರಿಸಿ ಪ್ರಾಮಾಣಿಕತೆ ಮೆರೆದಿದ್ದು ಎಲ್ಲರ ಮೆಚ್ಚುಗೆಗೆ ಪಾತ್ರಾವಾಗಿದೆ.

ಶಾಲಾ ಮುಖ್ಯೋಪಾಧ್ಯಾಯ ವಿದ್ವಾನ್‌ ಮಾಧವ ಅಡಿಗ ಅವರು ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ. ಹಣ ಕಳೆದುಕೊಂಡ ಸುಲೇಖಾ ಅವರು ಶಾಲೆಯ ಎಲ್ಲ ವಿದ್ಯಾರ್ಥಿಗಳಿಗೂ ಸಿಹಿತಿಂಡಿ ನೀಡಿದ್ದರು.

ವಿದ್ಯಾರ್ಥಿಗಳ ಕಾರ್ಯಕ್ಕೆ ಶಿಕ್ಷಣ ಸಚಿವರ ಮೆಚ್ಚುಗೆ..
ಈ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಟ್ವೀಟ್ ಮಾಡಿರುವ ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ಅವರು, “ಶಾಲೆಗಳು ಮಕ್ಕಳಿಗೆ ಶಿಕ್ಷಣದ ಜತೆಗೆ ಜೀವನದ ಮೌಲ್ಯಗಳನ್ನು ತಿಳಿಸಿಕೊಡುವ ಕೇಂದ್ರಗಳು ಆಗಬೇಕು. ತಮಗೆ ದಾರಿಯಲ್ಲಿ ದೊರೆತ ಹಣವನ್ನು ಮಾಲಕರಿಗೆ ಹಿಂದಿರುಗಿಸಿದ ಕುಂದಾಪುರ ತಾಲೂಕಿನ ಸರಕಾರಿ ಶಾಲೆಯ ವಿದ್ಯಾರ್ಥಿನಿಯರಾದ ಶ್ರಾವ್ಯಾ, ಐಶ್ವರ್ಯ ಜೆ., ಪ್ರಸ್ತುತಿ ಮತ್ತು ವೈಷ್ಣವಿ ಅವರ ಪ್ರಾಮಾಣಿಕತೆ ಪ್ರಶಂಸನೀಯ” ಎಂದಿದ್ದಾರೆ.

Comments are closed.