ಕರಾವಳಿ

ಎಸ್.ಎಸ್.ಎಲ್.ಸಿ ಟಾಪರ್ ವಿದ್ಯಾರ್ಥಿಗಳಿಗೆ ಸನ್ಮಾನಿಸಿದ ಉಡುಪಿ‌ ಜಿಲ್ಲಾಧಿಕಾರಿ

Pinterest LinkedIn Tumblr

ಉಡುಪಿ: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 625 ಅಂಕ ಪಡೆದು ಸಾಧನೆಯನ್ನು ಮಾಡಿದ ವಿದ್ಯಾರ್ಥಿಗಳಿಗೆ ಉಡುಪಿ‌ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಅವರು ಸನ್ಮಾನಿಸಿದರು.

ಮಲ್ಪೆ ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಪುನೀತ್ ನಾಯಕ್, ಉಡುಪಿ ಬಾಲಕಿಯರ ಸರಕಾರಿ ಪದವಿಪೂರ್ವ ಕಾಲೇಜಿನ ಗಾಯತ್ರಿ ಹಾಗೂ ಕುಂದಾಪುರದ ಕಾಳಾವರ ಸರಕಾರಿ ಪ್ರೌಢಶಾಲೆಯ ನಿಶಾ ಇವರನ್ನು ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿಗಳು ಸನ್ಮಾನಿಸಿದರು.

ವೈದ್ಯರಾಗುವ, ಐಎಎಸ್ ಮಾಡುವ ಕನಸುಗಳನ್ನು ಹೊತ್ತ ಈ ಪ್ರತಿಭಾವಂತ ಯುವ ಪ್ರತಿಭೆಗಳಿಗೆ ಸೂಕ್ತ ಮಾರ್ಗದರ್ಶನವನ್ನು ಜಿಲ್ಲಾಧಿಕಾರಿ ಕೂರ್ಮರಾವ್ ನೀಡಿದರು.

ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ, ಉಪನಿರ್ದೇಶಕರು ಸಾರ್ವಜನಿಕ ಶಿಕ್ಷಣ ಇಲಾಖೆ ಗೋವಿಂದ ಮಡಿವಾಳ, ಶಿಕ್ಷಣಾಧಿಕಾರಿಗಳಾದ ಜಾನ್ಹವಿ, ಡಾ. ಅಶೋಕ ಕಾಮತ್ ಮೊದಲಾದವರು ಉಪಸ್ಥಿತರಿದ್ದರು.

Comments are closed.