ಕರಾವಳಿ

ಧರ್ಮಸ್ಥಳದಲ್ಲಿ ನಡೆದ ಭಾಷಣ ಸ್ಪರ್ಧೆಯಲ್ಲಿ ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ವಿದ್ಯಾರ್ಥಿನಿ ರಿಷಿಕಾ ದೇವಾಡಿಗ ಪ್ರಥಮ

Pinterest LinkedIn Tumblr

ಕುಂದಾಪುರ: ಜ್ಞಾನ ವಾರಿಧಿ ಮತ್ತು ಜ್ಞಾನ ಶರಧಿ ನೈತಿಕ ಮೌಲ್ಯಾಧಾರಿತ ಪುಸ್ತಕಗಳನ್ನಾಧರಿಸಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್ , ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ ಜ.27ರಂದು ಆಯೋಜಿಸಿದ ಭಾಷಣ ಸ್ಪರ್ಧೆಯಲ್ಲಿ ಪ್ರೌಢಶಾಲಾ ವಿಭಾಗದಲ್ಲಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ 8ನೇ ತರಗತಿಯ ರಿಷಿಕಾ ದೇವಾಡಿಗ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ.

ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಯ ವಿದ್ಯಾರ್ಥಿಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಈಕೆ ಕಳೆದ ವರ್ಷ ನಡೆದ ಇದೇ ಸ್ಪರ್ಧೆಯಲ್ಲಿ ಪ್ರಾಥಮಿಕ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದಿದ್ದರು. ವಿಜೇತ ವಿದ್ಯಾರ್ಥಿನಿಯನ್ನು ಧರ್ಮಸ್ಥಳದಲ್ಲಿ ನಡೆದ ‘ಪುರಸ್ಕಾರ ಸಮಾರಂಭ’ದಲ್ಲಿ ಖ್ಯಾತ ಸಾಹಿತಿ ಡಾ. ವಸಂತ ಭಾರದ್ವಾಜ್, ಕಬ್ಬಿನಾಲೆ ಇವರು ಸನ್ಮಾನಿಸಿದ್ದಾರೆ.

ವಿದ್ಯಾರ್ಥಿನಿಯ ಈ ಸಾಧನೆಯನ್ನು ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿ ಮತ್ತು ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ಪ್ರಾಂಶುಪಾಲರಾದ ಶರಣ ಕುಮಾರ ಅವರು ಅಭಿನಂದಿಸಿದ್ದಾರೆ.

Comments are closed.