ಕರಾವಳಿ

ಎಸ್ಎಸ್ಎಲ್‌ಸಿ ಫಲಿತಾಂಶ ಪ್ರಕಟ: ಶೇ.66.14 ವಿದ್ಯಾರ್ಥಿಗಳು ತೇರ್ಗಡೆ, 22 ವಿದ್ಯಾರ್ಥಿಗಳು ರಾಜ್ಯಕ್ಕೆ ಟಾಪರ್: ದ.ಕ ಪ್ರಥಮ, ಉಡುಪಿ ದ್ವಿತೀಯ ಸ್ಥಾನ

Pinterest LinkedIn Tumblr

 

(ಸಾಂದರ್ಭಿಕ ಚಿತ್ರ)

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ(KSEAB) 2024-25ನೇ ಸಾಲಿನ ಎಸ್‌ಎಸ್‌ಎಲ್‌ಸಿ+1 ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಇಂದು ಶುಕ್ರವಾರ ಪ್ರಕಟಿಸಿದ್ದು, ಈ ವರ್ಷ ಶೇ. 66.14ರಷ್ಟು ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ.

ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಇಲಾಖೆಯ ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ SSLC ಫಲಿತಾಂಶವನ್ನು ಪ್ರಕಟಿಸಿದ್ದು, ಇಂದು ಮಧ್ಯಾಹ್ನ 12.30ರ ನಂತರ ಇಲಾಖೆಯ ವೆಬ್ ಸೈಟ್ ಗಳಲ್ಲಿ ಫಲಿತಾಂಶಗಳನ್ನು ವೀಕ್ಷಿಸಬಹುದು.

ಮಾರ್ಚ್ 21 ರಿಂದ ಏಪ್ರಿಲ್ 4 ರವರೆಗೆ ಕರ್ನಾಟಕದಾದ್ಯಂತ 2,818 ಪರೀಕ್ಷಾ ಕೇಂದ್ರಗಳಲ್ಲಿ ಎಸ್‌ಎಸ್‌‌ಎಲ್‌ಸಿ ಪರೀಕ್ಷೆ ನಡೆಸಲಾಗಿತ್ತು. ಒಟ್ಟು ಸುಮಾರು 8.96 ಲಕ್ಷ ವಿದ್ಯಾರ್ಥಿಗಳು, 4,61,563 ಬಾಲಕರು ಮತ್ತು 4,34,884 ಬಾಲಕಿಯರು ಪರೀಕ್ಷೆ ಬರೆದಿದ್ದಾರೆ.

 

Comments are closed.