Uncategorized

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ : ಎಕ್ಸ್‌ಪರ್ಟ್ ಕಾಲೇಜಿಗೆ ಸಿಐಡಿ ದಾಳಿ :ಕಾಲೇಜಿನ ಮಾನ್ಯತೆ ರದ್ದುಪಡಿಸಲು ಡಿವೈಎಫ್‌ಐ ಆಗ್ರಹ

Pinterest LinkedIn Tumblr

ಮಂಗಳೂರು, ಎ.18: ದ್ವಿತೀಯ ಪಿಯುಸಿ ರಸಾಯನಶಾಸ್ತ್ರ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ಎಕ್ಸ್‌ಪರ್ಟ್ ಪಿಯು ಕಾಲೇಜಿನ ಮೇಲೆ ಸಿಬಿಐ ದಾಳಿ ಮಾಡಿರುವುದರಲ್ಲಿ ಸತ್ಯಾಂಶವಿದ್ದು, ಸರಕಾರ ಕೂಡಲೇ ಈ ಕಾಲೇಜಿನ ಮಾನ್ಯತೆಯನ್ನು ವಿದ್ಯಾರ್ಥಿಗಳಿಗೆ ತೊಂದರೆಯಾಗದ ರೀತಿಯಲ್ಲಿ ರದ್ದುಪಡಿಸಬೇಕು ಮತ್ತು ಡೊನೇಶನ್ ತೆಗೆದುಕೊಳ್ಳುವುದರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಡಿವೈಎಫ್‌ಐ ಮತ್ತು ಎಸ್‌ಎಫ್‌ಐ ನೇತೃತ್ವದಲ್ಲಿಂದು ಎಕ್ಸ್‌ಪರ್ಟ್ ಪಿಯು ಕಾಲೇಜು ಎದುರು ಧರಣಿ ನಡೆಯಿತು.

ಪ್ರತಿಭಟನೆಯಲ್ಲಿ ಮಾತನಾಡಿದ ಡಿವೈಎಫ್‌ಐ ಜಿಲ್ಲಾ ಉಪಾಧ್ಯಕ್ಷ ಬಿ.ಕೆ.ಇಮ್ತಿಯಾಝ್, ಎಕ್ಸ್ಸ್‌ಪರ್ಟ್ ಪಿಯು ಕಾಲೇಜಿನಲ್ಲಿ ಶಿಕ್ಷಣದ ದಂಧೆ ನಡೆಯುತ್ತಿದ್ದು, ಇಲ್ಲಿ ವಿದ್ಯಾರ್ಥಿಗಳನ್ನು ಮಾನಸಿಕವಾಗಿ ಹಿಂಸಿಸಲಾಗುತ್ತಿದೆ. ದ್ವಿತೀಯ ಪಿಯು ಪ್ರಶ್ನೆಪತ್ರಿಕೆ ಸೋರಿಕೆ ವಿಷಯದಲ್ಲಿ ಎಕ್ಸ್‌ಪರ್ಟ್ ಶಿಕ್ಷಣ ಸಂಸ್ಥೆಯ ಕೈವಾಡವಿದ್ದು, ಸರಕಾರ ಈ ಕಾಲೆಜಿನ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಮಕ್ಕಳ ಹಕ್ಕು ಹೋರಾಟ ಮತ್ತು ಪೋಷಕರ ಸಂಘದ ಅಧ್ಯಕ್ಷ ದಿನೇಶ್ ಹೆಗ್ಡೆ ಉಳೇಪಾಡಿ, ಡಿವೈಎಫ್‌ಐ ದ.ಕ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್, ಎಸ್‌ಎಫ್‌ಐ ಮುಖಂಡರಾದ ನಿತಿನ್ ಕುತ್ತಾರ್, ಚರಣ್ ಶೆಟ್ಟಿ, ನವೀನ್ ಕೊಂಚಾಡಿ, ಹಂಝ ಕಿನ್ಯ, ಚಸ್ಮಿತಾ ಮೊದಲಾದವರು ಪಾಲ್ಗೊಂಡಿದ್ದರು.

Write A Comment