Uncategorized

ಬಿಗ್ ಬಾಸ್ ಖ್ಯಾತಿಯ ಸುನಾಮಿ ಕಿಟ್ಟಿ ಬಂಧನ

Pinterest LinkedIn Tumblr

ಬಾರ್ ನೌಕರನ ಅಪಹರಣ, ಪ್ರಾಣ ಬೆದರಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಿಯಾಲಿಟಿ ಶೋದಲ್ಲಿ ಭಾಗವಹಿಸಿದ್ದ ಸುನಾಮಿ ಕಿಟ್ಟಿ ಅಲಿಯಾಸ್ ಪ್ರದೀಪನನ್ನು ಜ್ಞಾನ ಭಾರತಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ರೆಸ್ಟೋರೆಂಟ್ ಒಂದರಲ್ಲಿ ಬಾರ್ ನೌಕರನೊಬ್ಬರಿಗೆ ಗನ್ ತೋರಿಸಿ ಬೆದರಿಕೆ ಒಡ್ಡಿದ ಪ್ರಕರಣ ದಾಖಲಾಗಿತ್ತು. ಗಿರೀಶ್ ಎಂಬುವವರನ್ನು ಕಿಟ್ಟಿ ಮತ್ತು ಅವರ ತಂಡ ಅಪಹರಣ ಮಾಡಿದ್ದಾರೆ ಎಂದು ಆರೋಪಿಸಿ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಈ ಸಂಬಂಧ ಪೊಲೀಸರು ಸುನಾಮಿ ಕಿಟ್ಟಿ ಸೇರಿದಂತೆ ಅರ್ಜುನ್ ಮತ್ತು ಯೋಗೇಂದ್ರ ಎಂಬುವವರನ್ನು ಬಂಧಿಸಿದ್ದಾರೆ. ಈ ಪ್ರಕರಣದ ಇನ್ನೊಬ್ಬ ಆರೋಪಿ ಗಿರೀಶ್ ಎಂಬುವವರು ತಲೆಮರೆಸಿಕೊಂಡಿದ್ದು, ಅವರ ಪತ್ತೆಗಾಗಿ ಜ್ಞಾನಭಾರತಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

Comments are closed.