Uncategorized

ಅಯೋಧ್ಯೆ ಪ್ರಕರಣ : ಸುಪ್ರೀಂ ಕೋರ್ಟ್‌ಗೆ ತೀರ್ಪನ್ನು ಮರುಪರಿಶೀಲಿಸುವಂತೆ ಸುನ್ನಿ ವಕ್ಫ್‌ ಮಂಡಳಿ ಮನವಿ

Pinterest LinkedIn Tumblr

ನವದೆಹಲಿ: ಕಳೆದ ವಾರ ಅಯೋಧ್ಯೆಯ ರಾಮಲಲ್ಲಾನ ಪರವಾಗಿ ಸುಪ್ರೀಂ ಕೋರ್ಟ್ ನೀಡಿದ್ದ ತೀರ್ಪನ್ನು ಮರುಪರಿಶೀಲಿಸುವಂತೆ ಸುಪ್ರೀಂ ಕೋರ್ಟ್‌ಗೆ ಎಂದು ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಭಾನುವಾರ ತಿಳಿಸಿದೆ. ‘ಮಸೀದಿಗೆ ಬದಲಾಗಿ ಯಾವುದೇ ಭೂಮಿಯನ್ನು ನಾವು ಸ್ವೀಕರಿಸಲು ಸಾಧ್ಯವಿಲ್ಲ’ ಎಂದು ಮಂಡಳಿ ಹೇಳಿದೆ.

ಅಯೋಧ್ಯೆ ವಿಚಾರಕ್ಕೆ ಸಂಬಂಧಿಸಿ ಇತ್ತೀಚೆಗೆ ತೀರ್ಪು ನೀಡಿದ್ದ ಸುಪ್ರೀಂ ಕೋರ್ಟ್, ವಿವಾದಿತ 2.77 ಎಕರೆ ಜಾಗವನ್ನು ರಾಮಮಂದಿರ ನಿರ್ಮಾಣಕ್ಕೆ ನೀಡುವಂತೆಯೂ ಮಸೀದಿ ನಿರ್ಮಾಣಕ್ಕೆ ಸುನ್ನಿ ವಕ್ಫ್‌ ಮಂಡಳಿಗೆ ಬೇರೆ ಕಡೆ 5 ಎಕರೆ ಭೂಮಿ ನೀಡುವಂತೆಯೂ ಸರ್ಕಾರಕ್ಕೆ ಆದೇಶ ನೀಡಿತ್ತು.

ಸುಪ್ರೀಂ ಕೋರ್ಟ್ ತೀರ್ಪನ್ನು ಮರುಪರಿಶೀಲಿಸುವಂತೆ ಮನವಿ ಮಾಡುವುದಿಲ್ಲ ಎಂದು ಪ್ರಕರಣದ ಕಕ್ಷಿದಾರ ಸುನ್ನಿ ವಕ್ಫ್‌ ಮಂಡಳಿ ಈಗಾಗಲೇ ಸ್ಪಷ್ಟಪಡಿಸಿದೆ.

ಅಯೋಧ್ಯೆ ಪ್ರಕರಣದಲ್ಲಿ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಕಕ್ಷಿದಾರ ಅಲ್ಲ. ಆದರೆ ಅರ್ಜಿದಾರರಿಗೆ ಆರ್ಥಿಕವಾಗಿ ಮತ್ತು ಕಾನೂನು ಹೋರಾಟದಲ್ಲಿ ನೆರವಾಗಿದೆ. ಹೆಚ್ಚಿನ ಅರ್ಜಿದಾರರು ಮರುಪರಿಶೀಲನಾ ಅರ್ಜಿ ಸಲ್ಲಿಸಲು ಬಯಸಿದ್ದಾರೆ ಎಂದು ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಹೇಳಿದೆ.

Comments are closed.