Uncategorized

ಸಂಪು ವಿಸ್ತರಣೆ ವಿಳಂಬ; ಉಪ ಚುನಾವಣೆಯಲ್ಲಿ ಗೆದ್ದ ಶಾಸಕರಲ್ಲಿ ಮೂಡಿದ ನಿರಾಸೆ ಅಸಮಾಧಾನ !

Pinterest LinkedIn Tumblr

ಬೆಂಗಳೂರು: ಸಂಪುಟ ವಿಸ್ತರಣೆ ನಡೆಯದಿರುವ ಹಿನ್ನೆಲೆಯಲ್ಲಿ ಸಚಿವಕಾಂಕ್ಷಿಗಳಲ್ಲಿ ನಿರಾಸೆ ಅಸಮಾಧಾನ ಮೂಡಿದೆ. ಸಂಪುಟ ವಿಸ್ತರಣೆ ಸಂಬಂಧ ಸಿಎಂ ಯಡಿಯೂರಪ್ಪ ದೆಹಲಿಗೆ ತೆರಳಿ ಔಪಚಾರಿಕ ಭೇಟಿ ಕೂಡ ಮುಂದೂಡಲಾಗಿದೆ. ಇದು ಉಪ ಚುನಾವಣೆಯಲ್ಲಿ ಗೆದ್ದ ಶಾಸಕರ ಅಸಮಾಧಾನಕ್ಕೆ ಕಾರಣವಾಗಿದೆ.

ನೂಕನ ಶಾಸಕರ ನಿಯೋಗ ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಲು ನಿರ್ಧರಿಸಿದೆ ಆದರೆ ಸಂಪು ವಿಸ್ತರಣೆ ವಿಳಂಬವಾಗುತ್ತಿರುವುದಕ್ಕೆ ಕಾರಣ ಏನು ಎಂಬುದರ ಬಗ್ಗೆ ಯಾರೋಬ್ಪರಿಗೂ ಸುಳಿವಿಲ್ಲ, ಬಿಜೆಪಿಯಿಂದ ಆಯ್ಕೆಯಾದ 11 ಶಾಸಕರು 1 ತಿಂಗಳಿಂದ ಸಂಪುಟ ವಿಸ್ತರಣೆಯಾಗುತ್ತದೆ ಎಂದು ಚಾತಕ ಪಕ್ಷಿಗಳಂತೆ ಕಾಯುತ್ತಿದ್ದಾರೆ. ಏನಾಗುತ್ತಿದೆ ಎಂಬುದರ ಬಗ್ಗೆ ಅವರಿಗೆ ಸುಳಿವಿಲ್ಲ.

ಸಂಪುಟ ವಿಸ್ತರಣೆ ವಿಳಂಬವಾಗುತ್ತಿರುವುದು ಪಕ್ಷಕ್ಕೆ ಅಥವಾ ಸರ್ಕಾರಕ್ಕೆ ಲಾಭವಾಗುತ್ತಿದೆಯೋ ಗೊತ್ತಿಲ್ಲ, ನಮ್ಮನ್ನು ಆರಿಸಿ ಕಳುಹಿಸಿರುವ ನನ್ನ ಕ್ಷೇತ್ರದ ಮತದಾರರು ನಮ್ಮ ಮೇಲೆ ಅಪಾರ ನಂಬಿಕೆಯಿಟ್ಟಿದ್ದಾರೆ, ತಕ್ಷಣದಿಂದಲೇ ನಾವು ಸಂಪುಟಕ್ಕೆ ಸೇರಬೇಕು ಎಂಬುದು ಅವರ ಆಸೆ. ಆದರೆ ಇಷ್ಟೊಂದು ಸಮಯ ತೆಗೆದುಕೊಳ್ಳುತ್ತಿವುದು ಏತಕ್ಕಾಗಿ ಎಂಬುದು ತಿಳಿಯುತ್ತಿಲ್ಲ ಎಂಬುದು ಚಿಕ್ಕಬಳ್ಳಾಪುರ ಶಾಸಕ ಡಾ. ಕೆ ಸುಧಾಕರ್ ತಿಳಿಸಿದ್ದಾರೆ.

ಸಿಎಂ ಯಡಿಯೂರಪ್ಪ ಅವರು ನಮಗೆ ಮಾತು ನೀಡಿದ್ದಾರೆ. ಅವರು ಕೊಟ್ಟ ಮಾತನ್ನು ಉಳಿಸಿಕೊಳ್ಳಲಿದ್ದಾರೆ, ಜನವರಿ 14 ರ ನಂತರ ಸಂಪುಟ ವಿಸ್ತರಣೆಯಾಗಲಿದೆ ಎಂದು ಕೆಲವು ಶಾಸಕರು ಅಭಿಪ್ರಾಯ ಪಟ್ಟಿದ್ದಾರೆ. ಆದರೆ ದೆಹಲಿ ಪ್ರವಾಸ ರದ್ದಾಗಿರುವುದು ಏಕೆ ಎಂಬುದು ನಮಗೆ ತಿಳಿದಿಲ್ಲ ಎಂದು ಬೇಸರ ವ್ಯಕ್ತ ಪಡಿಸಿದ್ದಾರೆ.

ಉಪ ಚುನಾವಣೆ ಫಲಿತಾಂಶ ಪ್ರಕಟವಾಗಿ ತಿಂಗಳಾಗುತ್ತಿದೆ, ಸಿಎಂ ಯಡಿಯೂರಪ್ಪ ನಮ್ಮನ್ನು ಮಂತ್ರಿ ಮಂಡಲಕ್ಕೆ ಸೇರಿಸಿಕೊಳ್ಳುವುದಾಗಿ ವಚನ ನೀಡಿದ್ದಾರೆ, ವಿಳಂಬವಾಗುತ್ತಿರುವುದು ನಿಜ. ಆದರೆ ಏಕೆ ಎಂಬುದು ತಿಳಿದಿಲ್ಲ, ಕೇಂದ್ರದ ಬಿಜೆಪಿ ನಾಯಕರು ಈ ಸಂಬಂಧ ಶೀಘ್ರ ನಿರ್ಧಾರಕ ಕೈಗೊಳ್ಳಲಿದ್ದಾರೆ. ಇನ್ನು 10-15 ದಿನಗಳಲ್ಲಿ ಸಂಪುಟ ವಿಸ್ತರಣೆ ನಡೆಯುತ್ತದೆ ಎಂದು ಮಹಾಲಕ್ಷ್ಮಿ ಲೇಔಟ್ ಶಾಸಕ ಗೋಪಾಲಯ್ಯ ತಿಳಿಸಿದ್ದಾರೆ.

Comments are closed.