Uncategorized

ಡಿ. 1ರಿಂದ ದಂತ, ವೈದ್ಯಕೀಯ ಕಾಲೇಜು ಆರಂಭಕ್ಕೆ ನಿರ್ಧಾರ

Pinterest LinkedIn Tumblr


ಬೆಂಗಳೂರು: ರಾಜೀವ್ ಗಾಂಧಿ ಆರೋಗ್ಯ ವಿವಿಯ ಎಲ್ಲಾ ವೈದ್ಯಕೀಯ, ದಂತ ವೈದ್ಯಕೀಯ, ಆಯುಷ್, ಪ್ಯಾರಾ ಮೆಡಿಕಲ್, ನರ್ಸಿಂಗ್ & ಫಾರ್ಮಸಿ ಕಾಲೇಜುಗಳನ್ನು ಡಿಸೆಂಬರ್ 1ರಿಂದ ಪುನರಾರಂಭಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಈ ಕುರಿತು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಅವರು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿದ್ದು, ರಾಜೀವ್ ಗಾಂಧಿ ಆರೋಗ್ಯ ವಿವಿಯ ಎಲ್ಲಾ ವೈದ್ಯಕೀಯ, ದಂತ ವೈದ್ಯಕೀಯ, ಆಯುಷ್, ಪ್ಯಾರಾ ಮೆಡಿಕಲ್, ನರ್ಸಿಂಗ್ & ಫಾರ್ಮಸಿ ಕಾಲೇಜುಗಳನ್ನು ಡಿಸೆಂಬರ್ 1ರಿಂದ ಪುನರಾರಂಭಿಸಲು ನಿರ್ಧರಿಸಲಾಗಿದೆ. ಈಗಾಗಲೇ ಪ್ರಕಟಿಸಿರುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ಕಾಲೇಜುಗಳ ಆಡಳಿತ ಮಂಡಳಿಗಳನ್ನು ಹಾಗೂ ವಿದ್ಯಾರ್ಥಿಗಳನ್ನು ವಿನಂತಿಸುತ್ತೇನೆಂದು ಹೇಳಿದ್ದಾರೆ.

ನವೆಂಬರ್ 17 ರಿಂದ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಆಫ್‌ಲೈನ್ ತರಗತಿಗಳನ್ನು ಪ್ರಾರಂಭಿಸಲು ಸರ್ಕಾರ ನಿರ್ಧರಿಸಿದೆ ಎಂದು ಈ ಹಿಂದೆ ಉಪ ಮುಖ್ಯಮಂತ್ರಿ ಸಿಎನ್ ಅಶ್ವತ್ ನಾರಾಯಣ್ ತಿಳಿಸಿದ್ದರು. ಈ ನಿರ್ಧಾರದ ಬೆನ್ನಲ್ಲೇ ಇದೀಗ ದಂತ, ವೈದ್ಯಕೀಯ ಕಾಲೇಜು ಆರಂಭಕ್ಕೆ ಸರ್ಕಾರ ನಿರ್ಧರಿಸಿದೆ.

ಕಾಲೇಜುಗಳಿಗೆ ವಿದ್ಯಾರ್ಥಿಗಳು ಭೇಟಿ ನೀಡುವುದೋ ಅಥವಾ ಆನ್’ಲೈನ್ ಕ್ಲಾಸ್ ಗಳನ್ನೇ ಮುಂದುವರೆಸುವ ಎರಡೂ ಆಯ್ಕೆಯನ್ನು ವಿದ್ಯಾರ್ಥಿಗಳಿಗೇ ನೀಡಲಾಗಿದೆ. ಪ್ರಾಕ್ಟಿಕಲ್ ಕ್ಲಾಸ್’ಗಳಿಗೆ ವಿದ್ಯಾರ್ಥಿಗಳು ನೇರವಾಗಿ ಕಾಲೇಜುಗಳಿಗೆ ಹಾಜರಾಗುವುದು ಕಡ್ಡಾಯ ಮಾಡಲಾಗಿದೆ.

Comments are closed.